Friday, November 22, 2024
Google search engine
HomeUncategorizedಸತ್ಯದ ದನಿಯಾಗಿ ನಿಂತಿದ್ದಕ್ಕೆ ಪತ್ರಕರ್ತರ ಬಂಧನ, ಕೊಲೆ - ಜೆ.ಪಿ.ನಡ್ಡಾ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಸತ್ಯದ ದನಿಯಾಗಿ ನಿಂತಿದ್ದಕ್ಕೆ ಪತ್ರಕರ್ತರ ಬಂಧನ, ಕೊಲೆ – ಜೆ.ಪಿ.ನಡ್ಡಾ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮಾಧ್ಯಮಗಳ ಮೇಲಿನ ನೈಜ ದಾಳಿಗಳ ಪಟ್ಟಿ ನಾವು ಕೊಡುತ್ತೇವೆ. ಇದನ್ನೆಲ್ಲ ನೀವು ಮರೆತಿರಬಹುದು, ಆದರೆ “ಇಂಡಿಯಾ” ಮರೆತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸತ್ಯದ ವರದಿ ಮಾಡಿದ್ದಕ್ಕಾಗಿ ಸಿದ್ದಿಕ್ ಕಪ್ಪನ್, ಮೊಹಮ್ಮದ್ ಝುಬೇರ್, ಅಜಿತ್ ಓಝಾ, ಜಸ್ಪಾಲ್ ಸಿಂಗ್, ಸಜದ್ ಗುಲ್ ಎಂಬ ಪತ್ರಕರ್ತರನ್ನು ಬಂಧನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸತ್ಯದ ದನಿಯಾಗಿ ನಿಂತಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ಉತ್ತರ ಪ್ರದೇಶದಲ್ಲಿ ಸರ್ಕಾರಿ ನಿಧಿ ವ್ಯವಹಾರ ಕುರಿತು ವರದಿ ಮಾಡಿದ್ದಕ್ಕಾಗಿ ರಾಕೇಶ್‌ ಸಿಂಗ್‌ ಅವರನ್ನು, ತಮಿಳುನಾಡು ಗೋಮಾಳ ಅಕ್ರಮ ಮಾರಾಟ ಕುರಿತು ವರದಿ ಮಾಡಿದ್ದಕ್ಕಾಗಿ ಜೆ.ಮೋಸೆಸ್ ಅವರನ್ನು, ಅಸ್ಸಾಮ್ ನಲ್ಲಿ ಎಸ್ಐ ನೇಮಕಾತಿ ಹಗರಣದ ಕುರಿತು ವರದಿ ಮಾಡಿದ್ದಕ್ಕಾಗಿ ಪರಾಗ್ ಭುಯಾನ್ ಮತ್ತು ಕೋಮುವಾದ ವಿರೋಧಿಸಿದ್ದಕ್ಕೆ ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಪತ್ರಿಕಾ ಸ್ವಾತಂತ್ಯ್ರದಲ್ಲಿ ಜಗತ್ತಿನಲ್ಲಿ ಭಾರತದ ಸ್ಥಾನ, ಅವಸಾನವಾಗಿದೆ. 2015 – 136ನೇ ಸ್ಥಾನ, 2019 – 140ನೇ ಸ್ಥಾನ, 2022 – 150ನೇ ಸ್ಥಾನ, 2023 – 161ನೇ ಸ್ಥಾನ ಪಡೆದುಕೊಂಡಿದೆ ಎಂದು ನೆನಪಿಸಿದ್ದಾರೆ.

ಪಕ್ಷವೊಂದು ಸುದ್ದಿ ಮಾಧ್ಯಮಕ್ಕೆ ಬರುವುದಿಲ್ಲ, ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂಬುದು ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಅಲ್ಲ. ಪ್ರಧಾನಿ ನರೇಂದ್ರ ಮೋದಿ ಕುರಿತಾದ ಬಿಬಿಸಿ ಸಾಕ್ಷ್ಯಚಿತ್ರವನ್ನು ನಿಷೇಧಿಸಿದ್ದು ನಿಜವಾದ ಅಭಿವ್ಯಕ್ತಿ ಸ್ವಾತಂತ್ಯ್ರದ ಹರಣ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular