Friday, October 18, 2024
Google search engine
Homeಮುಖಪುಟತುಮಕೂರಿಗೂ ಮೆಟ್ರೋ ವಿಸ್ತರಣೆ - ಗೃಹ ಸಚಿವ ಡಾ.ಜಿ.ಪರಮೇಶ್ವರ್

ತುಮಕೂರಿಗೂ ಮೆಟ್ರೋ ವಿಸ್ತರಣೆ – ಗೃಹ ಸಚಿವ ಡಾ.ಜಿ.ಪರಮೇಶ್ವರ್

ಸಾಫ್ಟವೇರ್ ಉದ್ಯಮದಲ್ಲಿ ರಾಜ್ಯದ ಪಾಲು ಶೇಕಡಾ 60ರಷ್ಟು ಇದ್ದು ಹಾರ್ಡ್ ವೇರ್ ನಲ್ಲಿ ಅಭಿವೃದ್ಧಿ ಹೊಂದಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರು ಜಿಲ್ಲೆಯ ಪ್ರಮುಖ ಕೈಗಾರಿಕೆಗಳ ಸಿ.ಇ.ಒ ಗಳು ಹಾಗೂ ಹೂಡಿಕೆದಾರರ ಸಮ್ಮೇಳನದಲ್ಲಿ ಮಾತನಾಡಿದ ಅವರು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಪ್ರಮಾಣದಲ್ಲಿ ಬೆಳವಣಿಗೆಗೆ ಅವಕಾಶ ಇದೆ, ಸ್ಟಾರ್ಟ ಅಪ್ ಬೆಳೆಯಬೇಕು. ಚಂದ್ರಯಾನದಲ್ಲಿ ಸ್ಥಳೀಯ ಕೈಗಾರಿಕಾ ಕೊಡುಗೆ ಇದೆ ಎಂದರು.

ಮೆಟ್ರೋ ತುಮಕೂರು ಜಿಲ್ಲೆಯವರೆಗೂ ಪರಿಶೀಲನೆ ಹಂತದಲ್ಲಿದೆ, ನಮ್ಮ ಸಂಸ್ಥೆಯಲ್ಲಿ ಓದಿದ 50 ಸಾವಿರ ವಿದ್ಯಾರ್ಥಿಗಳು ಇಂಜಿನಿಯರಿಂಗ್ ಪದವಿ ಪಡೆದಿದ್ದಾರೆ ಎಂದು ಹೇಳಿದರು.

ಪಾವಗಡ ಪ್ರಪಂಚದ 3ನೇ ವಿಶ್ವದ ಅತಿ ದೊಡ್ಡ ಸೌರ ವಿದ್ಯುತ್ ಉತ್ಪಾದನೆ ಮಾಡುವ ಕೇಂದ್ರ ವಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಎಂಟರ್ ಟೈನ್ ಮೆಂಟ್, ಇನ್ನೋವೇಶನ್ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳು ಇವೆ, ಉದ್ಯಮ ರಂಗ ಹೊಸ ಸಾಧ್ಯತೆಗಳಿಗೆ ಒಡ್ಡಿಕೊಳ್ಳಲು ಪ್ರೇರೇಪಣೆ ನೀಡುವುದು ಈ ಪ್ರಶಸ್ತಿಯ ಮೂಲ ಉದ್ದೇಶವಾಗಿದ್ದು, ಇದೀಗ ಜಿಲ್ಲೆಯಲ್ಲಿ ನಡೆದಿರುವ ಈ ಕಾರ್ಯಕ್ರಮದಲ್ಲಿ ಉದ್ಯಮ ರಂಗದ ಹೆಚ್ಚು ಮಂದಿ ಪಾಲ್ಗೊಂಡಿದ್ದು, ಎಲ್ಲಾ ಕೈಗಾರಿಕೋದ್ಯಮಿಗಳು ಜಿಲ್ಲೆಯಲ್ಲಿ ಹೂಡಿಕೆ ಮಾಡಬೇಕು ಎಂದು ಮನವಿ ಮಾಡಿದರು.

ಉದ್ಯಮ ರಂಗದಲ್ಲಿ ಸಾಧನೆ ಮಾಡಿ ಆರ್ಥಿಕ ಬೆಳವಣಿಗೆ ತಮ್ಮದೇ ಸೇವೆ ಸಲ್ಲಿಸುತ್ತಿರುವರನ್ನು ಸನ್ಮಾನ ಮಾಡಿ ಪ್ರಶಸ್ತಿ ನೀಡುವುದು ಗೌರವದ ವಿಷಯವಾಗಿದೆ, ಎಲ್ಲ ಕ್ಷೇತ್ರಗಳಲ್ಲಿ ಕೈಗಾರಿಕೆಗಳ ಕೊಡುಗೆ ಅಪಾರವಾಗಿದ್ದು, ಜಿಲ್ಲೆಯು ಹೂಡಿಕೆದಾರರ ಆಕರ್ಷಣೆ ಕೇಂದ್ರವಾಗಿ ಹೊರಹೊಮ್ಮಬೇಕು ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಕೈಗಾರಿಕಾ ವಲಯವನ್ನು ಸಮಗ್ರವಾಗಿ ಬೆಳೆಸಲು ಗಂಭೀರ ಪ್ರಯತ್ನ ನಡೆದಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular