Friday, October 18, 2024
Google search engine
Homeಮುಖಪುಟಬಿಜೆಪಿಯಿಂದ ಕಲ್ಯಾಣ ಕರ್ನಾಟಕದ ನಿರ್ಲಕ್ಷ್ಯ - ಸಿಎಂ ಸಿದ್ದರಾಮಯ್ಯ ಆರೋಪ

ಬಿಜೆಪಿಯಿಂದ ಕಲ್ಯಾಣ ಕರ್ನಾಟಕದ ನಿರ್ಲಕ್ಷ್ಯ – ಸಿಎಂ ಸಿದ್ದರಾಮಯ್ಯ ಆರೋಪ

ಭ್ರಷ್ಟಾಚಾರ ಮತ್ತು ಕೋಮುವಾದದಲ್ಲಿ ಮುಳುಗಿದ್ದ ಹಿಂದಿನ ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದರಿಂದ ಈ ಭಾಗದ ಅಭಿವೃದ್ಧಿ ವೇಗವು ಆಮೆಗತಿಯಲ್ಲಿ ಸಾಗುತ್ತಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ನಮ್ಮ ಸರ್ಕಾರ ಬಂದ ಮೇಲೆ ಅಲ್ಪ ಸಮಯದಲ್ಲೇ ಹಲವು ಹೊಸ ಕಾರ್ಯಕ್ರಮಗಳ ಜಾರಿ ಮಾಡಿ ಮತ್ತು ಹಳೆಯ ಯೋಜನೆಗಳನ್ನು ಪೂರ್ಣಗೊಳಿಸಲು ಕ್ರಮಕೈಗೊಂಡಿದ್ದರಿಂದ ಕಲ್ಯಾಣ ಕರ್ನಾಟಕವು ರಾಜ್ಯದ ಇತರೆ ಜಿಲ್ಲೆಗಳಿಗೆ ಸಮನಾಗಿ ಪ್ರಗತಿಯ ಹಾದಿಯಲ್ಲಿ ಸಾಗುತ್ತಿದೆ ಎಂದು ಹೇಲಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ದ್ರೋಹ ಬಗೆದಿದೆ. ಬಿಜೆಪಿ ಆಡಳಿತದಲ್ಲಿ ಕಲ್ಯಾಣ ಕರ್ನಾಟಕ ಶೈಕ್ಷಣಿಕವಾಗಿ ಹಿಂದುಳಿದಿದೆ. 16 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಯಾಗಿಲ್ಲ. ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸರಾಸರಿ ಅನುಪಾತ ರಾಜ್ಯ 1.16 ಇದ್ದರೆ, ಕಲ್ಯಾಣ ಕರ್ನಾಟಕದಲ್ಲಿ 1.35ರಷ್ಟು ಇದೆ.

371(ಜೆ)ಗೆ ಬಿಜೆಪಿ ಸರ್ಕಾರ ಅಡ್ಡಗಾಲು ಹಾಕಿತ್ತು. 2002ರಲ್ಲಿ ಎನ್.ಡಿ.ಎ ಸರ್ಕಾರದಲ್ಲಿ ಉಪ ಪ್ರಧಾನಿಯಾಗಿದ್ದ ಎಲ್.ಕೆ.ಅಡ್ವಾಣಿ ಅವರು ಯಾವುದೇ ಕಾರಣಕ್ಕೂ ಸಂವಿಧಾನ ತಿದ್ದುಪಡಿ ಮಾಡಿ 371(ಜೆ) ವಿಶೇಷ ಮೀಸಲಾತಿ ಸೌಲಭ್ಯ ನೀಡಲು ಸಾಧ್ಯವಿಲ್ಲ ಎಂದು ಅಂದಿನ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು ಎಂದು ಹೇಳಿದ್ದಾರೆ.

2018ರಲ್ಲಿ ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಪ್ರತಿ ಎರಡು ವರ್ಷಗಳಿಗೊಮ್ಮೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕೈಗಾರಿಕಾ ವಲಯದ ಬಂಡವಾಳ ಹೂಡಿಕೆ ಸಮಾವೇಶ ಆಯೋಜನೆ ಮಾಡುವುದಾಗಿ ಹೇಳಿತ್ತು. ಆದರೆ ಅದನ್ನು ಮಾಡಿಲ್ಲ ಎಂದು ಸಿದ್ದರಾಮಯ್ಯ ದೂರಿದ್ದಾರೆ.

2022-23ರ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗೆ 3 ಸಾವಿರ ಕೋಟಿ ಅನುದಾನ ಘೋಷಿಸಿದ್ದ ಬಿಜೆಪಿ ಸರ್ಕಾರ ಅದರ ಅರ್ಧದಷ್ಟು ಅನುದಾನವನ್ನು ನೀಡಿಲ್ಲ ಎಂದು ಟೀಕಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular