ಆಟವಾಡುತ್ತಿದ್ದ ಸಮಯದಲ್ಲಿ ವಿದ್ಯುತ್ ತಂತಿ ತಗುಲಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ಪಟ್ಟಣದಲ್ಲಿ ಸಂಭವಿಸಿದೆ.
ಮೃತ ಬಾಲಕನನ್ನು ಹತ್ತು ವರ್ಷದ ಋತ್ವಿಕ್ ಎಂದು ಗುರುತಿಸಲಾಗಿದೆ.
ಭಾನುವಾರ ರಾತ್ರಿ ಮನೆಯ ಹತ್ತಿರ ಖಾಲಿ ನಿವೇಶನವೊಂದರಲ್ಲಿ ಆಟವಾಡುತ್ತಿದ್ದ ಋತ್ವಿಕ್ ಸಮೀಪದಲ್ಲಿ ಹಾದುಹೋಗಿದ್ದ ವಿದ್ಯುತ್ ತಂತಿಯನ್ನು ಮುಟ್ಟಿದ್ದು, ಕೂಡಲೇ ವಿದ್ಯುತ್ ಸ್ಪರ್ಶಿಸಿ ಬಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ವಿದ್ಯುತ್ ಹರಿಯುವ ತಂತಿಗಳನ್ನು ಮಕ್ಕಳು ಆಡುವ ಜಾಗದಲ್ಲಿ ಬಿಟ್ಟಿದ್ದೇ ದುರಂತಕ್ಕೆ ಕಾರಣ ಎಂದು ಸ್ಥಳೀಯರು ದೂರಿದ್ದಾರೆ.
ಕುಣಿಗಲ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.