Friday, November 22, 2024
Google search engine
Homeಮುಖಪುಟಶಕ್ತಿ ಯೋಜನೆಗೆ 100 ದಿನ - 64 ಕೋಟಿ ಮಹಿಳೆಯರು ಪ್ರಯಾಣ

ಶಕ್ತಿ ಯೋಜನೆಗೆ 100 ದಿನ – 64 ಕೋಟಿ ಮಹಿಳೆಯರು ಪ್ರಯಾಣ

ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲೆಗೆ ಹೋಗುವ ಪ್ರತಿ ಹೆಣ್ಣುಮಗಳು, ಕುಟುಂಬದ ಹೊಣೆಯನ್ನು ತನ್ನ ಹೆಗಲ ಮೇಲೆ ಹೊತ್ತು ನಿತ್ಯ ದುಡಿಮೆಗೆ ತೆರಳುವ ನಾಡಿನ ಅಕ್ಕ ತಂಗಿಯರು, ವೈದ್ಯಕೀಯ ಚಿಕಿತ್ಸೆಗಾಗಿ ಪ್ರಯಾಣ ಬೆಳೆಸುವ ಬಡತಾಯಂದಿರ ಬದುಕಿನ ಬವಣೆ ನಮ್ಮ ಶಕ್ತಿ ಯೋಜನೆಯ ಹಿಂದಿರುವ ಪ್ರೇರಕ ಶಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹೆಣ್ಣುಮಕ್ಕಳು ನಾಲ್ಕು ಗೋಡೆಗಳಿಗೆ ಸೀಮಿತವಾಗದೆ, ಅವಕಾಶಗಳ ಜಗತ್ತಿನಲ್ಲಿ ತಮ್ಮನ್ನು ತೊಡಗಿಸಿಕೊಂಡು, ತಾವು ಸದೃಢರಾಗುವ ಜೊತೆಗೆ ಬಲಿಷ್ಠ ಸಮಾಜದ ಆಧಾರ ಸ್ತಂಭಗಳಾಗಬೇಕು ಎಂಬ ನಮ್ಮ ಉದ್ದೇಶವನ್ನು ಈಡೇರಿಸುವ ದಿಕ್ಕಿನಲ್ಲಿ ಶಕ್ತಿ ಯೋಜನೆ ಮುಂದಡಿಯಿಡುತ್ತಿದೆ ಎಂದು ತಿಳಿಸಿದ್ದಾರೆ.

ಶಕ್ತಿ ಯೋಜನೆ ಜಾರಿಗೊಂಡ ಈ ನೂರು ದಿನಗಳಲ್ಲಿ ಅಸಂಖ್ಯ ತಾಯಂದಿರಲ್ಲಿ ನೆಮ್ಮದಿಯ ನಿಟ್ಟುಸಿರಿಗೆ, ಲಕ್ಷಾಂತರ ವಿದ್ಯಾರ್ಥಿನಿಯರ ಮುಖದಲ್ಲಿ ಮಂದಹಾಸಕ್ಕೆ ಕಾರಣವಾಗಿದೆ ಎಂಬುದು ಯೋಜನೆ ಜಾರಿಗೆ ಕೊಟ್ಟ ನನಗೆ ಅತ್ಯಂತ ಖುಷಿಯ ಸಂಗತಿ ಎಂದು ಹೇಳಿದ್ದಾರೆ.

ಶಕ್ತಿ ಯೋಜನೆ ಜಾರಿಗೊಂಡ ನೂರು ದಿನಗಳ ಅವಧಿಯಲ್ಲಿ ನಾಡಿನ ಹೆಣ್ಣು ಮಕ್ಕಳಿಂದ ದೊರೆಯುತ್ತಿರುವ ಸ್ಪಂದನೆ ನಮ್ಮ ನಿರೀಕ್ಷೆಗೂ ಮೀರಿದ್ದು ಎಂದು ತಿಳಿಸಿದ್ದಾರೆ.

ಈ ವರೆಗೆ ಒಟ್ಟು 64 ಕೋಟಿ ಮಹಿಳೆಯರು ( ಪ್ರಯಾಣ ಸಂಖ್ಯೆ ) ಉಚಿತ ಪ್ರಯಾಣ ಸೌಲಭ್ಯದ ಸದುಪಯೋಗ ಪಡೆದಿದ್ದು, ಇದಕ್ಕಾಗಿ ಸರ್ಕಾರವು ರೂ. 1,472 ಕೋಟಿ ವೆಚ್ಚ ಮಾಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಶಿಕ್ಷಣ, ಉದ್ಯೋಗ, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ನಿತ್ಯಬದುಕಿನ ಅವಶ್ಯಕತೆಗಳಿಗಾಗಿ ಪ್ರಯಾಣ ಬೆಳೆಸುವ ಹೆಣ್ಣುಮಕ್ಕಳಿಗೆ ಈ ಯೋಜನೆ ವರದಾನವಾಗಿದೆ ಎಂದು ವಿವರಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular