Saturday, October 19, 2024
Google search engine
Homeಮುಖಪುಟಶಿವಮೊಗ್ಗದಲ್ಲಿ ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ - 40 ಜನರ ಬಂಧನ - ಸಿಎಂ...

ಶಿವಮೊಗ್ಗದಲ್ಲಿ ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ – 40 ಜನರ ಬಂಧನ – ಸಿಎಂ ಸಿದ್ದರಾಮಯ್ಯ

ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆಯ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈದ್ ಮೆರವಣಿಗೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ಮೇಲೂ ಕಲ್ಲು ತೂರಾಟ ನಡೆದಿದೆ. ಮನೆಗಳ ಮೇಲೂ ಕಲ್ಲು ತೂರಾಟ ನಡೆದಿದ್ದು ಕಲ್ಲು ತೂರಿದವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಕಲ್ಲು ತೂರಾಟದಿಂದ ಪರಿಸ್ಥಿತಿ ಉದ್ವಿಗ್ನಕ್ಕೆ ಹೋದಾಗ ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಿದ್ದಾರೆ. ಈಗ ಶಿವಮೊಗ್ಗದ ರಾಗಿಗುಡ್ಡದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದರು.

ನಮ್ಮ ಸರ್ಕಾರ ದೇವರು, ಧರ್ಮದ ಹೆಸರಿನಲ್ಲಿ ಇಂತಹ ಕೃತ್ಯ ಎಸಗುವವರನ್ನು ಸಹಿಸುವುದಿಲ್ಲ. ಹಾಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಈದ್ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆಸಿದ ಎರಡೂ ಕಡೆಯವರನ್ನು ಬಂಧಿಸಿದ್ದೇವೆ. ಅವರ ಹೆಸರುಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಎಲ್ಲೂ ಅಹಿತಕರ ಘಟನೆ ಸಂಭವಿಸಲು ಬಿಡುವುದಿಲ್ಲ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular