Saturday, October 19, 2024
Google search engine
Homeಜಿಲ್ಲೆಸಾಲಬಾಧೆ - ರೈಲಿಗೆ ಸಿಲುಕಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸಾಲಬಾಧೆ – ರೈಲಿಗೆ ಸಿಲುಕಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಸಾಲಬಾಧೆಯಿಂದ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ತಾಲ್ಲೂಕಿನ ಪಂಡಿತನಹಳ್ಳಿಯಲ್ಲಿ ನಡೆದಿದೆ.

ಆತ್ಮಹತ್ಯೆಗೆ ಶರಣಾದವರನ್ನು ಸಿದ್ದಗಂಗಯ್ಯ, ಸುನಂದಮ್ಮ ಮತ್ತು ಗೀತಾ ಎಂದು ಗುರುತಿಸಲಾಗಿದೆ.

ಬೆಸ್ಕಾಂನಲ್ಲಿ ಕಾರ್ಯನಿರ್ವಹಿಸಿದ್ದ ಸಿದ್ದಗಂಗಯ್ಯ ಕಳೆದ 2 ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ನಂತರ ಬೆಂಗಳೂರಿನ ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆ ಬಳಿ ಟೀ ಶಾಪ್ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಇಂದು ಬೆಳಗ್ಗೆ ಆಟೋದಲ್ಲಿ ಬಂದು ಪಂಡಿತನಹಳ್ಳಿ ರೈಲ್ವೆ ಹಳಿ ಬಳಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರೈಲು ಗುದ್ದಿದ ರಭಸಕ್ಕೆ ಮೃತ ದೇಹಗಳು ಚಲ್ಲಾಪಿಲ್ಲಿಯಾಗಿ ಬಿದ್ದಿವೆ. ಸದ್ಯ ಮೃತ ದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular