ಜಾತ್ಯತೀತ ಜನತಾ ದಳದೊಂದಿಗೆ ಮೈತ್ರಿ ಮಾಡಿಕೊಳ್ಳುವುದಕ್ಕೆ ವೈಯಕ್ತಿಕವಾಗಿ ನನ್ನ ವಿರೋಧವಿದೆ ಎಂದು ಭಾರತೀಯ ಜನತಾ ಪಕ್ಷದ ಶಾಸಕ ಎಸ್.ಟಿ.ಸೋಮಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಮೈತ್ರಿ ನೋಡಿದ್ದೇನೆ. ಬಿಜೆಪಿ ಜೊತೆಗೂ ನೋಡಿದ್ದೇನೆ. ಕಾಂಗ್ರೆಸ್ ಗೆ ಜೆಡಿಎಸ್ ಮೊದಲಿನಿಂದಲೂ ವಿರೋಧವಿದೆ ಎಂದು ತಿಳಿಸಿದ್ದಾರೆ.
ಜಾತ್ಯತೀತ ಜನತಾ ದಳದಲ್ಲಿ ಮಾನಸಿಕವಾಗಿ ಕಿರುಕುಳ ಇದೆ. ಅಧಿಕೃತವಾಗಿ ಮೈತ್ರಿಯಾದ ನಂತರ ನನ್ನ ಮುಂದಿನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದಾರೆ.
ಜೆಡಿಎಸ್ ಜೊತೆಗಿನ ಮೈತ್ರಿಗೆ ಎಲ್ಲರಿಗೂ ಅಸಮಾಧಾನವಿದೆ. ಅವರ ಈ ಕುರಿತಾಗಿ ನಮ್ಮ ಪಕ್ಷದಲ್ಲಿ ಯಾರನ್ನೂ ಕರೆದು ಚರ್ಚೆ ಮಾಡಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.