Wednesday, December 4, 2024
Google search engine
Homeಮುಖಪುಟರಾಹುಲ್ ಗಾಂಧಿಯನ್ನು ರಾವಣನಿಗೆ ಹೋಲಿಸಿರುವುದನ್ನು ಖಂಡಿಸಿ ತುಮಕೂರಿನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ರಾಹುಲ್ ಗಾಂಧಿಯನ್ನು ರಾವಣನಿಗೆ ಹೋಲಿಸಿರುವುದನ್ನು ಖಂಡಿಸಿ ತುಮಕೂರಿನಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಎಐಸಿಸಿ ನಾಯಕ ರಾಹುಲ್‌ಗಾಂಧಿ ಅವರನ್ನು ರಾವಣನಿಗೆ ಹೊಲಿಸಿ, ಪೋಸ್ಟರ್ ಸಿದ್ದಪಡಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿರುವ ಬಿಜೆಪಿ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ತುಮಕೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.

ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ನೇತೃತ್ವದಲ್ಲಿ ತುಮಕೂರಿನ ಭದ್ರಮ್ಮ ಸರ್ಕಲ್‌ನಲ್ಲಿ ಸಾಂಕೇತಿಕ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಬಿಜೆಪಿಯ ಈ ಹೀನ ಕೃತ್ಯಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ, ರಾಹುಲ್ ಗಾಂಧಿ ಕುಟುಂಬದ ಇತಿಹಾಸವನ್ನು ಸರಿಯಾಗಿ ಅರ್ಥ ಮಾಡಿಕೊಳ್ಳದ ಬಿಜೆಪಿಗರು, ಇಂಡಿಯಾ ಒಕ್ಕೂಟದಿಂದ ದಿಕ್ಕೆಟ್ಟು ಈ ರೀತಿಯ ಅವಹೇಳನಕಾರಿ ಪೋಸ್ಟರಗಳನ್ನು ಬಿಡುಗಡೆ ಮಾಡಿರುವುದು ಖಂಡನೀಯ ಎಂದರು.

ಟೀಕೆಗೂ ಒಂದು ರೀತಿ, ನೀತಿ ಇದೆ. ಅದು ಯಾವಾಗಲು ಪ್ರಜಾ ಸತ್ತಾತ್ಮಕವಾಗಿ ಇರಬೇಕು. ಈ ರೀತಿಯ ಅಸಹ್ಯ ಹುಟ್ಟಿಸುವಂತೆ ಇರಬಾರದು. ರಾಜಕೀಯ ದುರುದ್ದೇಶದಿಂದ ವ್ಯಕ್ತಿಯನ್ನು ಪದೇ ಪದೇ ತಜೋವಧೆ ಆಡುವುದು ಸರಿಯಲ್ಲ. ಬಿಜೆಪಿ ತನ್ನ ನಡವಳಿಕೆ ತಿದ್ದಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕಾಂಗ್ರೆಸ್ ಮುಖಂಡ ಷಣ್ಮುಖಪ್ಪ ಮಾತನಾಡಿ, ರಾಹುಗಾಂಧಿಯವರನ್ನು ರಾವಣನಿಗೆ ಹೊಲಿಸಿದ್ದಾರೆ. ರಾವಣ ಸಕಲ ವಿದ್ಯಾಪಾರಂಗತ, ಬ್ರಹ್ಮನಿಗೆ ಮಂತ್ರೋಪದೇಶ ಮಾಡಿದಂತಹ ಮಹಾನ್ ವ್ಯಕ್ತಿ. ತನ್ನ ತಪ್ಪಸ್ಸಿನ ಮೂಲಕ ಶಿವನನ್ನು ಮೆಚ್ಚಿಸಿ ಆತನ ಆತ್ಮಲಿಂಗವನ್ನು ಬಳುವಳಿಯಾಗಿ ಪಡೆದಂತಹ ಧೀರ. ಇದನ್ನು ಸರಿಯಾದ ಅರ್ಥೈಸಿಕೊಳ್ಳದ ಬಿಜೆಪಿಗರು, ರಾಹುಲ್‌ಗಾಂಧಿ ಅವರನ್ನು ಹಿಯಾಳಿಸಲು ಹೋಗಿ ತಾವೇ ಪೇಚಿಗೆ ಸಿಲುಕಿದ್ದಾರೆ ಎಂದರು.

ಪ್ರತಿಭಟನೆಯಲ್ಲಿ ಮುಖಂಡರಾದ ಆತೀಕ್ ಅಹಮದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಜಾತ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಬೂಬ್ ಪಾಷ, ಮಹೇಶ್, ನರಸಿಂಹಮೂರ್ತಿ, ಶೆಟ್ಟಾಳಯ್ಯ, ಆದಿಲ್, ಕೈದಾಳ ರಮೇಶ್, ಹೆಬ್ಬೂರು ಶ್ರೀನಿವಾಸಮೂರ್ತಿ, ಉಬೇದುಲ್ಲಾ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular