Sunday, September 8, 2024
Google search engine
Homeಮುಖಪುಟಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ - ಸಾವಿನ ಸಂಖ್ಯೆ 14ಕ್ಕೆ ಏರಿಕೆ - ತನಿಖೆಗೆ ಎಚ್.ಡಿ.ಕೆ...

ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ – ಸಾವಿನ ಸಂಖ್ಯೆ 14ಕ್ಕೆ ಏರಿಕೆ – ತನಿಖೆಗೆ ಎಚ್.ಡಿ.ಕೆ ಆಗ್ರಹ

ಬೆಂಗಳೂರು ನಗರ ಜಿಲ್ಲೆಯ ಅನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಶನಿವಾರ ಸಂಜೆ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ.

ಮೃತಪಟ್ಟ ಕಾರ್ಮಿಕರಲ್ಲಿ ಬಹುತೇಕರು ತಮಿಳುನಾಡಿನ ಶಿವಕಾಶಿ ಮೂಲದವರಾಗಿದ್ದು, ಮೃತದೇಹಗಳು ಸುಟ್ಟು ಕರಕಲಾಗಿವೆ. ಅಗ್ನಿ ದುರಂತದ ಹಿನ್ನೆಲೆಯಲ್ಲಿ ಗೋದಾಮಿನ ಮಾಲಿಕ ರಾಮಸ್ವಾಮಿ ರೆಡ್ಡಿ ಹಾಗೂ ಜಾಗದ ಮಾಲಿಕ ಅನಿಲ್ ವಿರುದ್ಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಡಿ.ಕೆ.ಶಿ ಭೇಟಿ – ಸಂತಾಪ

ಆನೇಕಲ್‌ ಬಳಿಯ ಅತ್ತಿಬೆಲೆ ಸಮೀಪ ಸಂಭವಿಸಿರುವ ಪಟಾಕಿ ದುರಂತದಲ್ಲಿ 12 ಮಂದಿ ಜೀವಂತ ದಹನವಾಗಿರುವ ಸುದ್ದಿ ದುಃಖಕರ. ವಿಷಯ ತಿಳಿದ ಕೂಡಲೇ ದುರಂತ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ದುರಂತದ ಕಾರಣ ಸಂಬಂಧ ಸೂಕ್ತ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ನೋವಿನಲ್ಲಿರುವ ಕುಟುಂಬದ ಜೊತೆ ನಾವಿದ್ದೇವೆ ಎಂದಿದ್ದಾರೆ.

ಅಗ್ನಿ ದುರಂತ – ತನಿಖೆಗೆ ಎಚ್.ಡಿ.ಕೆ ಒತ್ತಾಯ:

ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಸಂಗ್ರಹಗಾರದಲ್ಲಿ ಸಂಭವಿಸಿರುವ ಅಗ್ನಿ ದುರಂತದಲ್ಲಿ 14 ಜನ ಕಾರ್ಮಿಕರು ದುರಂತ ಸಾವು ಕಂಡಿರುವ ಘಟನೆಯ ಬಗ್ಗೆ ತಿಳಿದು ನನಗೆ ತೀವ್ರ ದಿಗ್ಭ್ರಮೆ ಉಂಟಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ದೀಪಾವಳಿಗೆ ಬದುಕು ಕಟ್ಟಿಕೊಳ್ಳಲು ಹೊರಟಿದ್ದ ಈ ಮುಗ್ಧ ಜೀವಗಳು ಬೆಂಕಿಯ ಕೆನ್ನಾಲಿಗೆಗೆ ಸಿಕ್ಕಿ ಬಲಿಯಾಗಿರುವ ಘಟನೆ ನನ್ನ ಮನವನ್ನು ಕಲಕಿದೆ ಎಂದು ಹೇಳಿದ್ದಾರೆ.

ಜೀವ ಕಳೆದುಕೊಂಡ ಎಲ್ಲಾ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕುಟುಂಬಗಳಿಗೆ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಬೆಂಗಳೂರು ನಗರದ ವ್ಯಾಪ್ತಿಯಲ್ಲಿ ಸಂಭವಿಸಿರುವ ಈ ಘಟನೆ ಅನೇಕ ಪ್ರಶ್ನೆಗಳಿಗೆ ದಾರಿ ಮಾಡಿಕೊಟ್ಟಿದೆ. ಸುರಕ್ಷತೆ ಬಗ್ಗೆ ಮುನ್ನೆಚ್ಚರಿಕೆ ವಹಿಸದೆ ಇದ್ದಿದ್ದೇ ದುರಂತಕ್ಕೆ ಕಾರಣ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಆರೋಪಿಸಿದ್ದಾರೆ.

ಈ ಬಗ್ಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು, ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಮುಂದೆ ಇಂತಹ ಘಟನೆಗಳು ನಡೆಯದಂತೆ ಕಟ್ಟೆಚ್ಚರ ವಹಿಸಬೇಕು ಎಂದು ಹೇಳಿದ್ದಾರೆ. ಬದುಕು ಕಳೆದುಕೊಂಡ ಕುಟುಂಬಗಳಿಗೆ ರಾಜ್ಯ ಸರಕಾರ ಆಸರೆಯಾಗಿ ನಿಲ್ಲಬೇಕು ಸಲಹೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular