Saturday, October 19, 2024
Google search engine
Homeಮುಖಪುಟಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ ಜೆಡಿಎಸ್ ರಾಜ್ಯಧ್ಯಕ್ಷ ಸಿ.ಎಂ.ಇಬ್ರಾಹಿಂ

ಯಾವುದೇ ಕಾರಣಕ್ಕೂ ಬಿಜೆಪಿಯೊಂದಿಗೆ ಮೈತ್ರಿ ಇಲ್ಲ ಜೆಡಿಎಸ್ ರಾಜ್ಯಧ್ಯಕ್ಷ ಸಿ.ಎಂ.ಇಬ್ರಾಹಿಂ

ಯಾವುದೇ ಕಾರಣಕ್ಕೂ ಭಾರತೀಯ ಜನತಾ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಡುವುದಿಲ್ಲ. ಜೆಡಿಎಸ್ ನಾಯಕ ಎಚ್.ಡಿ.ಕುಮಾರ ಸ್ವಾಮಿ ತೆಗೆದುಕೊಂಡಿರುವ ತೀರ್ಮಾನಕ್ಕೆ ಯಾವುದೇ ಬೆಲೆ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಆಗಸ್ಟ್ 16ರಂದು ಕರೆದಿದ್ದ ಆಪ್ತರು ಮತ್ತು ಬೆಂಬಲಿಗರ ಸಭೆಯಲ್ಲಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ INDIA ಬೆಂಬಲ ಕೇಳಿದರೆ ಜಾತ್ಯತೀತ ಜನತಾ ದಳ ಬೆಂಬಲಿಸಲಿದೆ. ಎನ್.ಡಿ.ಎ ಜೊತೆ ಹೋಗುವುದಿಲ್ಲ ಎಂದು ಹೇಳಿದರು.

ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳದಂತೆ ಪಕ್ಷದ ವರಿಷ್ಠ ಎಚ್.ಡಿ.ದೇವೇಗೌಡರಿಗೆ ಮನವರಿಕೆ ಮಾಡಿಕೊಡುತ್ತೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶೇ.22ರಷ್ಟು ಮುಸ್ಲೀಮರು ಜೆಡಿಎಸ್ ಗೆ ಮತ ಚಲಾಯಿಸಿದ್ದಾರೆ. ಇದರಿಂದ 19 ಎಂಎಲ್.ಎಗಳು ಆಯ್ಕೆಯಾಗಲು ಅವಕಾಶವಾಯಿತು. ಇದು ಕುಮಾರಸ್ವಾಮಿ ಅವರಿಗೆ ಗೊತ್ತಿಲ್ಲವೇ ಎಂದು ಪ್ರಶ್ನಿಸಿದರು.

ನಾನು ಈಗಲೂ ಜೆಡಿಎಸ್ ಅಧ್ಯಕ್ಷನಾಗಿದ್ದೇನೆ. ನನಗೆ ತಿಳಿಸದಂತೆ ಎಚ್.ಡಿ.ಕುಮಾರಸ್ವಾಮಿ ಅವರು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ ಮೈತ್ರಿಕೂಟಕ್ಕೆ ಬೆಂಬಲಿಸುತ್ತೇವೆ ಎಂದು ಹೇಳಿ ಬಂದಿದ್ದಾರೆ. ಈ ತೀರ್ಮಾನಕ್ಕೆ ಮಾನ್ಯತೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಮ್ಮದೇ ನಿಜವಾದ ಜಾತ್ಯತೀತ ಜನತಾ ದಳ ಎಂದು ಸಿಎಂ ಇಬ್ರಾಹಿಂ ಹೇಳಿದ್ದಾರೆ. ಈ ಮೂಲಕ ಜೆಡಿಎಸ್ ಇಬ್ಬಾಗವಾಗುವ ಸೂಚನೆಯನ್ನು ನೀಡಿದ್ದಾರೆ ಎಂದು ವಿಶ್ಲೇಷಣೆಗಳು ಶುರವಾಗಿವೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಸಿಎಂ ಇಬ್ರಾಹಿಂ ತಾಕತ್ತಿದ್ದರೆ ನನ್ನನ್ನು ಉಚ್ಛಾಟನೆ ಮಾಡಲಿ ಎಂದು ಸವಾಲು ಹಾಕಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular