Thursday, January 29, 2026
Google search engine
Homeಮುಖಪುಟಮಾಜಿ ಸಿಎಂ ಕುಮಾರಸ್ವಾಮಿಗೆ ಮಾನ, ಮರ್ಯಾದೆ ಇಲ್ಲ - ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್

ಮಾಜಿ ಸಿಎಂ ಕುಮಾರಸ್ವಾಮಿಗೆ ಮಾನ, ಮರ್ಯಾದೆ ಇಲ್ಲ – ಕಾಂಗ್ರೆಸ್ ಮುಖಂಡ ಎಂ.ಲಕ್ಷ್ಮಣ್

ಬಿಜೆಪಿಯವರು ಕಳೆದ ಮೂರು ತಿಂಗಳಿಂದ ಕುಮಾರಸ್ವಾಮಿ ಅವರ ಆಡಿಷನ್ ಮಾಡುತ್ತಿದೆ. ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೇಗೆ ವಾಗ್ದಾಳಿ ಮಾಡುತ್ತಾರೆ ಎಂಬುದರ ಆಧಾರದ ಮೇಲೆ ಮುಂದೆ ಅವರಿಗೆ ಬಿಜೆಪಿಯಲ್ಲಿ ಯಾವ ಹುದ್ದೆ ನೀಡಬೇಕು ಎಂಬುದನ್ನು ನಿರ್ಧರಿಸಲಿದೆ ಎಂದು ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ಹೇಳಿದ್ದಾರೆ.

ಎರಡು ಬಾರಿ ಮುಖ್ಯಮಂತ್ರಿಯಾಗಿರುವ ಕುಮಾರಸ್ವಾಮಿ ಅವರಿಗೆ ಮಾನ ಮರ್ಯಾದೆ ಇದ್ದರೆ, ಯಾರದೋ ಮೇಲಿನ ಐಟಿ ದಾಳಿಗೆ ಕಾಂಗ್ರೆಸ್ ಜತೆ ನಂಟು ಹಾಕುತ್ತಿರುತ್ತಿರಲಿಲ್ಲ. ಇವರ ನಾಟಕವನ್ನು ಜನ ನೋಡುತ್ತಿದ್ದಾರೆ. ಅವರು ಮುಟ್ಟಾಳರಲ್ಲ. ಈಗಾಗಲೇ ಅವರು ಕಳೆದ ಚುನಾವಣೆಯಲ್ಲಿ ಪಾಠ ಕಲಿಸಿದ್ದು, ಲೋಕಸಭೆ ಚುನಾವಣೆಯಲ್ಲೂ ಪಾಠ ಕಲಿಸಲಿದ್ದಾರೆ ಎಂದು ಟೀಕಿಸಿದ್ದಾರೆ.

ಐಟಿ ಇಲಾಖೆ ಹೇಳಿಕೆಯಲ್ಲಿ ತೆರಿಗೆ ವಂಚನೆ ಉದ್ದೇಶದಿಂದ ಕೆಲವು ಗುತ್ತಿಗೆದಾರರು, ವಾಸ್ತುಶಿಲ್ಪಿಗಳು ಹಣವನ್ನು ವೈಟ್ ಮಾತ್ರವಲ್ಲದೇ, ಡಿಜಿಟಲ್ ಮಾರ್ಗದಲ್ಲಿ ವ್ಯವಹಾರ ಮಾಡದೇ, ನಗದಿನ ರೂಪದಲ್ಲಿ ವ್ಯವಹಾರ ಮಾಡಿದ್ದಾರೆ. ಐಟಿ ಇಲಾಖೆ ಸ್ಪಷ್ಟ ಹೇಳಿಕೆ ನೀಡಿದ ನಂತರವೂ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಅವರಿಗೆ ಮರ್ಯಾದೆ ಇದೆಯಾ ಎಂದು ಕೇಳಿದ್ದಾರೆ.

ಬಿಜೆಪಿ ರಾಜ್ಯವನ್ನು ದಿವಾಳಿ ಮಾಡಿತ್ತು. ಸಿದ್ದರಾಮಯ್ಯ ಅವರು ಸರ್ಕಾರ ಬರುವ ಮುಂಚೆಯೇ ಬಿಜೆಪಿ ಮಾಡಿರುವ ಅನಾಹುತ ಸರಿಪಡಿಸಲು ಕನಿಷ್ಠ 1 ವರ್ಷ ಸಮಯ ಬೇಕು ಎಂದು ಹೇಳಿದ್ದರು. ಆದರೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿಯ ಒಕ್ಕಲಿಗ ಸಮುದಾಯದ ಮುಖಂಡರುಗಳ ಜತೆ ಸೇರಿ ಡಿ.ಕೆ. ಶಿವಕುಮಾರ್ ಹಾಗೂ ಅವರ ಕುಟುಂಬವನ್ನು ಮುಗಿಸಲು ಹೊಂಚು ಹಾಕುತ್ತಿದ್ದಾರೆ. ನಾಳೆ ಏನಾದರೂ ಶಿವಕುಮಾರ್ ಅವರಿಗೆ ತೊಂದರೆ ಆದರೆ ಕುಮಾರಸ್ವಾಮಿ, ಸಿ.ಟಿ ರವಿ, ಅಸ್ವತ್ಥ್ ನಾರಾಯಣ್, ಆರ್ ಅಶೋಕ್ ಅವರೇ ನೇರ ಕಾರಣ. ಶಿವಕುಮಾರ್ ಅವರು ಡಿಸಿಎಂ ಆಗಿರುವುದನ್ನು ಸಹಿಸಲು ಆಗುತ್ತಿಲ್ಲ. ಬ್ಯ್ರಾಂಡ್ ಬೆಂಗಳೂರು ಮಾಡಲು ಹೊರಟರೆ ಅದರ ಬಗ್ಗೆ ಕೇವಲವಾಗಿ ಮಾತನಾಡುತ್ತಾರೆ. ನಿಮ್ಮ ಯೋಗ್ಯತೆಗೆ ಬೆಂಗಳೂರಿಗೆ ಸರಿಯಾದ ಅನುದಾನ ನೀಡಲಿಲ್ಲ. ಬೆಂಗಳೂರಿನಲ್ಲಿ 25 ಸಾವಿರ ರಸ್ತೆಗುಂಡಿಗಳಿವೆ ಎಂದು ಕೋರ್ಟ್ ಗೆ ಅಫಿಡವಿಟ್ ಕೊಟ್ಟಿದ್ದಿರಿ. ಈಗ ನೀವು ಟೀಕೆ ಮಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ನನ್ನ ಪ್ರಕಾರ ಮೋದಿ ಅವರಿಗೆ ಕರ್ನಾಟಕ ಹಾಗೂ ಕನ್ನಡಿಗರನ್ನು ಕಂಡರೆ ಸಿಟ್ಟಿದೆ. ಅದೇ ಕಾರಣಕ್ಕೆ ಸುಮಾರು 15-20 ಚಿನ್ನಾಭರಣ ಮಳಿಗೆ ರೈಡ್ ಮಾಡಿಸಿದ್ದಾರೆ. ಇವರಿಗೂ ಕಾಂಗ್ರೆಸ್ ಗೂ ಏನು ಸಂಬಂಧ? ಇವರ ಜತೆಗೆ 25 ಜೋತಿಷ್ಯಿಗಳ ಮೇಲೂ ದಾಳಿ ಮಾಡಿಸಿದ್ದೀರಿ. ಅವರ ಮನೆಯಲ್ಲಿ ಏನು ಸಿಗದೇ ಇದ್ದಾಗ ಐಟಿ ಅಧಿಕಾರಿಗಳು ಜೋತಿಷ್ಯ ಕೇಳಿಕೊಂಡು ಹೋಗಿದ್ದಾರೆ ಎಂದಿದ್ದಾರೆ.

ಕುಮಾರಸ್ವಾಮಿ ಅವರು ಬಹಳ ಬಾಲೀಶವಾಗಿ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರ ಮೈಸೂರು ಮನೆ ಯಾರು ಕಟ್ಟುತ್ತಿದ್ದಾರೆ? ಬೆಂಗಳೂರಿನ ಮನೆ ನವೀಕರಣ ಮಾಡುತ್ತಿರುವವರು ಯಾರು? ನೀವೇ ಹೇಳಿ ಸ್ವಾಮಿ. ಬೆಂಗಳೂರಿನ ಮನೆ ಕೃಷ್ಣ ಹಾಗೂ ಕಾವೇರಿ. ಇವೆರಡೂ ಸಿದ್ದರಾಮಯ್ಯ ಅವರ ಸ್ವಂತ ಮನೆಯಲ್ಲ ಸರ್ಕಾರದಿಂದ ನೀಡಿರುವ ಮನೆ. ಇದರ ನವೀಕರಣವನ್ನು ಪಿಡಬ್ಲ್ಯೂಡಿ ಅವರು ಮಾಡುತ್ತಾರೆ. ಅದರಲ್ಲೂ ಹಿಟ್ ಅಂಡ್ ರನ್ ಮಾಡುತ್ತೀರಿ. ಮೈಸೂರು ಮನೆ ಕಟ್ಟಲು ಆರಂಭಿಸಿ ಐದು ವರ್ಷವಾಗಿದೆ. ಹಣದ ಕೊರತೆಯಿಂದ ನಾಲ್ಕನೇ ಮಹಡಿ ಅರ್ಧಕ್ಕೆ ನಿಂತಿದೆ. ಪೆಟ್ರೋಲ್ ಬಂಕ್ ಇರುವುದು 50X80 ವಿಸ್ತೀರ್ಣದಲ್ಲಿ. ಇದು ಸಿದ್ದರಾಮಯ್ಯ ಅವರ ಹೆಸರಲ್ಲಿ ಇಲ್ಲ. ಸಿದ್ದರಾಮಯ್ಯ ಅವರು ಹಾಲಿ ವಾಸವಿರುವ ಮನೆ ಬಾಡಿಗೆ ಮನೆ. ಸಿದ್ದರಾಮಯ್ಯ ಅವರ ಹೆಸರಲ್ಲಿರುವ ಆಸ್ತಿ ಮೊತ್ತ 26 ಲಕ್ಷ ಮಾತ್ರ. ಅವರ ಬಳಿ ಎಷ್ಟು ಪಂಚೆ ಇವೆ ಎಂಬುದನ್ನು ಮಾತ್ರ ನಾನು ಚುನಾವಣಾ ಅಫಿಡವಿಟ್ ನಲ್ಲಿ ಸೇರಿಸಿಲ್ಲ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular