ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವರೊಬ್ಬರ ಹೆಸರು ತಳುಕು ಹಾಕಿಕೊಂಡಿರುವ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಐಡಿ ತನಿಖೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ತನಿಖಾ ವರದಿ ಬಂದ ಮೇಲೆ ಸತ್ಯಾಂಶ ಹೊರಬೀಳಲಿದೆ ಎಂದು ಹೇಳಿದ್ದಾರೆ.
ಪ್ರಕರಣವನ್ನು ಪರಿಶೀಲನೆ ಮಾಡಲೆಂದೇ ಅದನ್ನು ಸಿಐಡಿಗೆ ಕೊಟ್ಟಿದ್ದೇವೆ. ತನಿಖಾ ವರದಿಯನ್ನು ನೋಡಿಕೊಂಡು ಮುಂದುವರೆಯುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಹುಮುಖ್ಯವಾಗಿ ತನಿಖೆಯಲ್ಲಿ ಹೇಳಿಕೆ ಕೊಡುವವರನ್ನು ಪರಿಗಣಿಸಬೇಕು. ಸಚಿವರ ಹೆಸರು ಕೂಡ ಪ್ರಕರಣದಲ್ಲಿ ತಳುಕು ಹಾಕಿಕೊಂಡಿದೆ. ಹೀಗಾಗಿ ತನಿಖೆಗೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.