Friday, November 22, 2024
Google search engine
Homeಮುಖಪುಟರಾಹುಲ್ ಸಂಸತ್ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿದ ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್

ರಾಹುಲ್ ಸಂಸತ್ ಸದಸ್ಯತ್ವ ಮರುಸ್ಥಾಪನೆ ಪ್ರಶ್ನಿಸಿದ ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿ, ಅರ್ಜಿದಾರರಿಗೆ 1 ಲಕ್ಷ ರೂಪಾಯಿ ವೆಚ್ಚವನ್ನು ವಿಧಿಸಿದೆ.

ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಪೀಠವು ಅರ್ಜಿದಾರರ ಯಾವುದೇ ಮೂಲಭೂತ ಹಕ್ಕನ್ನು ಉಲ್ಲಂಘಿಸದ ಕಾರಣ ಅರ್ಜಿಯು ಕಾನೂನಿನ ಪ್ರಕ್ರಿಯೆಯ ದುರುಪಯೋಗವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ.

ರಾಹುಲ್ ಗಾಂಧಿ ಅವರ ಸದಸ್ಯತ್ವ ಮರುಸ್ಥಾಪನೆಯನ್ನು ಪ್ರಶ್ನಿಸಿ ವಕೀಲ ಅಶೋಕ್ ಪಾಂಡೆ ಅವರು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದೆ.

ಮೋದಿ ಉಪನಾಮದ ಮೇಲಿನ ಟೀಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆಗಸ್ಟ್ 4ರಂದು ಅವರ ಅವರ ಅಪರಾಧಿಗೆ ತಡೆ ನೀಡಿದ ನಂತರ ಲೋಕಸಭೆ ಸೆಕ್ರೆಟರಿಯೇಟ್ ಗಾಂಧೀ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿತು. ಮಾರ್ಚ್ 2023ರಲ್ಲಿ ಕೆಳಮನೆಯಿಂದ ನನರ್ಹಗೊಂಡ ಕಾಂಗ್ರೆಸ್ ನಾಯಕನನ್ನು ವಯನಾಡ್ ಸಂಸದರಾಗಿ ಮರುಸ್ಥಾಪಿಸಲಾಯಿತು.

ಬಿಜೆಪಿ ನಾಯಕ ಪೂರ್ಣೇಶ್ ಮೋದಿ ಅವರು 2019ರಲ್ಲಿ ಗಾಂಧಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ರಾಹುಲ್ ಎಲ್ಲಾ ಕಳ್ಳರು ಮೋದಿಯನ್ನು ಸಾಮಾನ್ಯ ುಪನಾಮವಾಗಿ ಹೇಗೆ ಹೊಂದಿದ್ದಾರೆ ಎಂದು ಏಪ್ರಿಲ್ 13, 2019ರಂದು ಕರ್ನಾಟಕದ ಕೋಲಾರದಲ್ಲಿ ಹಮ್ಮಿಕೊಂಡಿದ್ದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ವಿರುದ್ಧ ಆರೋಪಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular