ರಾಜ್ಯದ ರೈತರಿಗೆ ನಿರಂತರ 5 ಗಂಟೆಗಳ ಕಾಲ ವಿದ್ಯುತ್ ನೀಡಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ರಾಜ್ಯದ ವಿದ್ಯುತ್ ಉತ್ಪಾದಕ ಘಟಕಗಳ ಬಲವರ್ಧನೆ, ಹೊರ ರಾಜ್ಯದಿಂದ ತಾತ್ಕಾಲಿಕ ಒಪ್ಪಂದದ ಮೇರೆಗೆ ವಿದ್ಯುತ್ ಖರೀದಿ ಸೇರಿದಂತೆ ಹಲವು ರಚನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಬಿಜೆಪಿಯ ದುರಾಡಳಿತದಿಂದಾಗಿ ಕುಂಠಿತಗೊಂಡಿರುವ ವಿದ್ಯುತ್ ಉತ್ಪಾದನಾ ವಲಯವನ್ನು ಪುನಶ್ಚೇತನಗೊಳಿಸಿ, ಕರ್ನಾಟಕವನ್ನು ಮತ್ತೆ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬಿ ರಾಜ್ಯವಾಗಿಸಲು ಪಣತೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.
ಈ ಸಂಕಷ್ಟದ ಸಮಯದಲ್ಲಿ ಸಮರ್ಪಕ ವಿದ್ಯುತ್ ಪೂರೈಕೆಗಾಗಿ ನಾವು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.