ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ತುಮಕೂರಿನಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ತುಮಕೂರು ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ಅಕ್ಟೋಬರ್ 27ರಂದು ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದ್ದಾರೆ.
ನಗರದ ಖಾಸಗಿ ಮತ್ತು ಸರ್ಕಾರಿ ಶಾಲಾ ಕಾಲೇಜುಗಳಿಗೆ ರಜೆ ಅನ್ವಯವಾಗಲಿದೆ. ತುಮಕೂರು ನಗರವನ್ನು ಹೊರತುಪಡಿಸಿ ಉಳಿದೆಡೆಗಳಿಗೆ ಈ ಅದೇಶ ಅನ್ವಯವಾಗುವುದಿಲ್ಲ.