Friday, November 22, 2024
Google search engine
Homeಮುಖಪುಟಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ - ಸಿಎಂ ಸಿದ್ದರಾಮಯ್ಯ

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ – ಸಿಎಂ ಸಿದ್ದರಾಮಯ್ಯ

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ ಶೇ.60ರಷ್ಟು ಅನುದಾನವನ್ನು ಒದಗಿಸಬೇಕು ಎಂದು ಕನ್ನಡಿಗರು ಕೇಂದ್ರವನ್ನು ಒತ್ತಾಯಿಸುತ್ತಲೇ ಬರುತ್ತಿದ್ದಾರೆ. ಈಗಲಾದರೂ ಕನ್ನಡಿಗರಿಗೆ ನ್ಯಾಯ ಒದಗಿಸುತ್ತೀರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ.

2017ರಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಯ ಯೋಜನಾ ವೆಚ್ಚ ರೂ. 51,148 ಕೋಟಿ ಇದ್ದುದ್ದು ಈಗ ರೂ. 78 ಸಾವಿರ ಕೋಟಿಗೂ ಮೀರಿದೆ. ರಾಜ್ಯ ಸರ್ಕಾರ ವಾರ್ಷಿಕ ರೂ. 10,000 ದಿಂದ ರೂ.15,000 ಕೋಟಿ ಅನುದಾನ ನೀಡಿದರೂ ಯೋಜನೆ ಪೂರ್ಣಗೊಳ್ಳುವ ಹೊತ್ತಿಗೆ ಈಗಿನ ವೆಚ್ಚವೂ ದುಪ್ಪಟ್ಟಾಗಲಿದೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕಳೆದ ನಾಲ್ಕು ವರ್ಷ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ನಿಮ್ಮದೇ ಪಕ್ಷದ ಡಬ್ಬಲ್ ಇಂಜಿನ್‌ ಸರ್ಕಾರವಿತ್ತು, ಆಗಲೂ ಕೃಷ್ಣ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸದೆ ಜನರನ್ನು ಮೂರ್ಖರನ್ನಾಗಿಸಿದಿರಿ. ಹನಿ ನೀರಿಗಾಗಿ ನಾಡಿನ ರೈತರು ಇನ್ನೆಷ್ಟು ವರ್ಷ ನಿಮ್ಮ ಬಳಿ ಅಂಗಲಾಚಬೇಕು? ಈಗಲಾದರೂ ಕನ್ನಡಿಗರಿಗೆ ನ್ಯಾಯ ಒದಗಿಸುವಿರಾ? ಎಂದು ಕೇಳಿದ್ದಾರೆ.

ಕೇಂದ್ರದ ಭಾರತೀಯ ಜನತಾ ಪಕ್ಷದ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ. ಇದಕ್ಕೆ ಉತ್ತರಿಸಿ ಮೋದಿಯವರೇ ಎಂದು ಹೇಳಿದ್ದಾರೆ.

ಒಂದೂವರೆ ಕೋಟಿ ಜನಸಂಖ್ಯೆ ಹೊಂದಿರುವ ಬೆಂಗಳೂರು ನಗರದ ಅಗತ್ಯಕ್ಕೆ ತಕ್ಕಷ್ಟು ನೀರು ಒದಗಿಸುವುದು ಬಹುದೊಡ್ಡ ಸವಾಲು, ಈ ಉದ್ದೇಶಕ್ಕಾಗಿಯೇ ಸಿದ್ಧಪಡಿಸಿರುವ ಯೋಜನೆ ಮೇಕೆದಾಟು ಕೇಂದ್ರ ಸರ್ಕಾರದ ಅನುಮತಿ ಸಿಗದೆ ನೆನೆಗುದಿಗೆ ಬಿದ್ದಿದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕಾವೇರಿ ನಮ್ಮದು, ಮಳೆಗಾಲದಲ್ಲಿ ಹರಿದು ವ್ಯರ್ಥವಾಗಿ ಸಮುದ್ರ ಸೇರುವ ನಮ್ಮ ಪಾಲಿನ ನೀರನ್ನು ನಾವು ಬಳಕೆ ಮಾಡಿಕೊಳ್ಳಲು ಇನ್ನೆಷ್ಟು ವರ್ಷ ಕಾಯಬೇಕು? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದ ಭಾರತೀಯ ಜನತಾ ಪಕ್ಷದ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಇದಕ್ಕೆ ಉತ್ತರ ನೀಡಿ ಎಂದು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಮಳೆಕೊರತೆಯಿಂದಾಗಿ ಕೆಆರ್‌ಎಸ್, ಕಬಿನಿ, ಹೇಮಾವತಿ ಸೇರಿದಂತೆ ಬಹುತೇಕ ಜಲಾಶಯಗಳ ಒಡಲು ಬರಿದಾಗಿದೆ, ಗಾಯದ ಮೇಲೆ ಬರೆ ಎಳೆದಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮೇಲಿಂದ ಮೇಲೆ ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸುತ್ತಲೇ ಇದೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಬರದಿಂದ ಕಂಗಾಲಾಗಿರುವ ಕನ್ನಡಿಗರ ಕಷ್ಟ ಅರಿತು ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕಿದ್ದ ನೀವು ಕಾವೇರಿ ವಿಚಾರದಲ್ಲಿ ಮೌನಿಯಾದದ್ದು ಯಾಕೆ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ನೇತೃತ್ವದ ಭಾರತೀಯ ಜನತಾ ಪಕ್ಷದ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ನಾಡಿನ ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆ ಇದಕ್ಕೆ ಉತ್ತರ ಕೊಡಿ ಮೋದಿಯವರೇ ಎಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular