ಖಾಸಗಿ ಬಸ್ಸೊಂದು ಮಾರುತಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನ ಮರಳೂರು ಕೆರೆ ಏರಿ ಮೇಲೆ ನಡೆದಿದೆ.
ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ನಡೆದಿದ್ದು, ತುಮಕೂರು ತಾಲೂಕು ಮಾನಂಗಿ ಗ್ರಾಮದ ನಿವಾಸಿ ಸುರೇಶ್ (40), ಆತನ ಪತ್ನಿ ಸುಮಾ(30) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಕುಣಿಗಲ್ ನಿಂದ ತುಮಕೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಮತ್ತು ತುಮಕೂರಿನಿಂದ ಕುಣಿಗಲ್ ಕಡೆ ಹೋಗುತ್ತಿದ್ದ ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದ.
ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಘಟನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಖಾಸಗಿ ಬಸ್ ಚಾಲಕನನ್ನ ವಶಕ್ಕೆ ಪಡೆದ ತುಮಕೂರು ಗ್ರಾಮಾಂತರ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.