ನಾನು ಸಹ ಈ ಬಾರಿ ಲೋಕಸಭೆಗೆ ಸ್ಪರ್ಧಿಸಲು ಇಚ್ಚಿಸಿದ್ದೇನೆ. ಲೋಕಸಭೆಯನ್ನು ಒಮ್ಮೆ ನೋಡುವ ಆಸೆಯಿದೆ. ಹೈಕಮಾಂಡ್ ಒಪ್ಪಿ ಟಿಕೇಟ್ ನೀಡದರೆ ಸ್ಪರ್ಧಿಸುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಇಂಗಿತ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು, ಮುದ್ದಹನುಮೇಗೌಡ ಕಾಂಗ್ರೆಸ್‌ಗೆ ಬರುವ ಬಗ್ಗೆ ನನ್ನ ಬಳಿಯೂ ಕೆಲವರು ಚರ್ಚೆ ನಡೆಸಿದ್ದಾರೆ. ಹಾಗೆಯೇ ಡಾ.ಜಿ.ಪರಮೇಶ್ವರ್ ಹತ್ತಿರವೂ ಕೆಲವರು ಪ್ರಾಸ್ತಾಪಿಸಿದ್ದಾರೆ ಎನ್ನಲಾಗಿದೆ ಎಂದರು.
ತುಮಕೂರು ಗ್ರಾಮಾಂತರ ಕ್ಷತ್ರದ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಕಾಂಗ್ರೆಸ್ ಸೇರುವ ವಿಚಾರ ಗೊತ್ತಿಲ್ಲ. ಐದು ರಾಜ್ಯಗಳ ಚುನಾವಣೆ ನಂತರ ಮತ್ತಷ್ಟು ಬದಲಾವಣೆ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ತಳಸಮುದಾಯಗಳಲ್ಲಿ ರಾಜಕೀಯ ಪ್ರಜ್ಞೆ ಮೂಡಬೇಕಿದೆ. ಒಂದೇ ಮನೆಯಲ್ಲಿ ನಾನು ಎಂ.ಎಲ್.ಎ, ನನ್ನ ಮಗ ಎಂ.ಎಲ್.ಸಿ.ಅನ್ನುವ ತರ ಆಗಬಾರದು. ದ್ವನಿ ಇಲ್ಲದ ಸಮುದಾಯಗಳ ಕಥೆ ಏನು?.ಸಣ್ಣ ಪುಟ್ಟ ಸಮುದಾಯಗಳಿಗೆ ಅಧಿಕಾರ ಸಿಕ್ಕರೆ ಮಾತ್ರ ಸಾಮಾಜಿಕ ನ್ಯಾಯಕ್ಕೆ ಒಂದು ಬೆಲೆ. ಇಲ್ಲದಿದ್ದರೆ ಅದು ಪುಸ್ತಕಕ್ಕೆ ಮಾತ್ರ ಸೀಮಿತವಾಗಲಿದೆ ಎಂದು ಕೆ.ಎನ್.ರಾಜಣ್ಣ ತಿಳಿಸಿದರು.
ಶೀಘ್ರದಲ್ಲಿಯೇ ಜಾತಿ ಗಣತಿ ವರದಿಯನ್ನು ಸರ್ಕಾರ ಸ್ವೀಕರಿಸಲಿದೆ. ಅದನ್ನು ಸಾರ್ವಜನಿಕರ ಚರ್ಚೆಗೆ ಬಿಡಲಾಗುವುದು. ಅಲ್ಲಿ ಬರುವ ಸಾರ್ವಜನಿಕ ಅಭಿಪ್ರಾಯವನ್ನು ಪರಿಗಣಿಸಿ, ಯಾವುದನ್ನು ಬಿಡಬೇಕು. ಯಾವುದನ್ನು ತೆಗೆದುಕೊಳ್ಳಬೇಕು ಎಂದು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾಣ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ವರದಿ ಬಂದಾಕ್ಷಣ ಒಪ್ಪಬೇಕೆಂಬ ನಿಯಮವಿಲ್ಲ. ಬಿಹಾರದಲ್ಲಿ ಬಿಡುಗಡೆಯಾಯಿತು. ಯಾವ ಜನರಿಗೆ ತೊಂದರೆಯಾಯಿತು. ಹಾಗಾಗಿ ಕಾಂತರಾಜು ವರದಿಯನ್ನು ವಿರೋಧಿಸುವುದರಲ್ಲಿ ಅರ್ಥವಿಲ್ಲ. ವರದಿ ಸಾರ್ವಜನಿಕ ಚರ್ಚೆಗೆ ಬರದೆ ಅದು ಸರಿಯಿಲ್ಲ. ಇದು ಸರಿಯಿಲ್ಲ ಎಂದು ಹೇಳುವುದು ನ್ಯಾಯವಲ್ಲ. ಮೊದಲು ವರದಿಯನ್ನು ಓದಿ ನಂತರ ಅದನ್ನು ಒಪ್ಪಿಕೊಳ್ಳುವುದು ಬಿಡುವುದರ ಬಗ್ಗೆ ಚರ್ಚೆ ನಡೆಸೋಣ ಎಂದು ಸಲಹೆ ನೀಡಿದರು.