Friday, September 20, 2024
Google search engine
Homeಮುಖಪುಟಬುಧವಾರ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ

ಬುಧವಾರ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಕಾಂಗ್ರೆಸ್ ಸೇರ್ಪಡೆ

ತುಮಕೂರು ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಕೊನೆಗೂ ಜೆಡಿಎಸ್ ತೊರೆದು ಬುಧವಾರ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ. ತಮ್ಮ ನೂರಾರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರುತ್ತಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಗೌರಿಶಂಕರ್ ಕಾಂಗ್ರೆಸ್ ಸೇರಲಿದ್ದಾರೆ.

ಮಾಜಿ ಶಾಸಕ ಗೌರಿಶಂಕರ್ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿಗೆ ಕೊನೆಗೂ ತೆರೆ ಎಳೆದಿದ್ದಾರೆ. ತುಮಕೂರು ಗ್ರಾಮಾಂತರ ಮತ್ತು ನೆಲಮಂಗಲ ಭಾಗದಲ್ಲಿ ಗೌರಿಶಂಕರ್ ತಮ್ಮದೇ ಪ್ರಭಾವ ಹೊಂದಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗೌರಿಶಂಕರ್ ಅವರನ್ನು ಮನವೊಲಿಸಲು ಸಾಕಷ್ಟು ಪ್ರಯತ್ನ ನಡೆಸಿದ್ದರು. ಆದರೆ ಜೆಡಿಎಸ್-ಬಿಜೆಪಿ ಮೈತ್ರಿ ವಿರೋಧಿಸಿ ಗೌರಿಶಂಕರ್ ಕಾಂಗ್ರೆಸ್ ಸೇರುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಗೌರಿಶಂಕರ್ ಅವರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.

ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಮತ್ತು ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ಕಾಂಗ್ರೆಸ್ ಬರುವ ವಿಚಾರ ಚರ್ಚೆ ನಡೆದಿದೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular