ತುಮಕೂರು ಲೋಕಸಭಾ ಕ್ಷೇತ್ರಕ್ಕೆ ನಾನು ಅಭ್ಯರ್ಥಿ ಆಕಾಂಕ್ಷಿ ಆಗಿರುವುದು ಸತ್ಯ ಎಂದು ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ತುಮಕೂರು ಜನತೆ ಜಾತಿ ಮತ್ತು ಪಕ್ಷವನ್ನು ಹೊರತುಪಡಿಸಿ ಮುದ್ಧಹನುಮೇಗೌಡರ ಬಗ್ಗೆ ಒಂದು ಅಪಾರವಾದ ನಂಬಿಕೆ ಇದೆ ಆ ವರ್ಗದ ಜನಕ್ಕೆ ನಾನು ಋಣಿಯಾಗಿರುತ್ತೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ-ಜೆಡಿಎಸ್ ಮೈತ್ರಿ ಆಗಿದ್ದು ಜೆಡಿಎಸ್ ಈ ಕ್ಷೇತ್ರ ಜೆಡಿಎಸ್ ಪಕ್ಷಕ್ಕೆ ಮೀಸಲಿಟ್ಟರೆ ನೀವು ಜೆಡಿಎಸ್ ಪಕ್ಷ ಸೇರುತ್ತೀರಾ ಎಂಬ ಪ್ರಶ್ನೆಗೆ ಆ ಪ್ರಶ್ನೆ ಉದ್ಭವಿಸುವುದಿಲ್ಲ. ಏಕೆಂದರೆ ಬಿಜೆಪಿ ಪಕ್ಷದ ವರಿಷ್ಠರು ಹಾಗೂ ಸ್ಥಳೀಯ ಮುಖಂಡರು ನಮ್ಮ ಬಗ್ಗೆ ವಿಶ್ವಾಸ ಇಟ್ಟುಕೊಳ್ಳುವುದಾಗಿ ಹೇಳಿದ್ದಾರೆ, ನಾನು ಇಲ್ಲಿಯೇ ಸ್ಪರ್ಧಿಸುತ್ತೇನೆ ಎಂದರು.
ಬಿಜೆಪಿ ಪಕ್ಷದಲ್ಲಿ ಟಿಕೆಟ್ ನೀಡಿದರೆ ಇಂಡಿಪೆಂಡೆಂಟ್ ಆಗಿ ನಿಂತುಕೊಳ್ಳುತ್ತೀರಾ ಎಂಬುದಕ್ಕೆ ಉತ್ತರಿಸಿದ ಅವರು,ಸ್ವತಂತ್ರವಾಗಿ ಸ್ಪರ್ಧಿಸುವ ಅವಶ್ಯಕತೆ ನನಗಿಲ್ಲ, ಪಕ್ಷವೇ ಟಿಕೆಟ್ ನೀಡುವಾಗ ನಾನು ಸ್ವತಂತ್ರವಾಗಿ ಕೇಳಿದ್ದು ಕೊಡಲಿ ಆ ವಿಚಾರವಾಗಿ ಮುಂದಿನ ದಿನಗಳಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಹೇಳಿದ್ದಾರೆ.
ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಯನ್ನು ತಳ್ಳಿಹಾಕಿದ ಅವರು, ನಾನು ಈ ಎಲ್ಲಾ ಪ್ರಶ್ನೆಗಳಿಗೆ ಈಗ ಉತ್ತರ ನೀಡುವುದಿಲ್ಲ, ನಾನು ಬಿಜೆಪಿ ಪಕ್ಷದಲ್ಲಿದ್ದೇನೆ ಇಲ್ಲಿಯೇ ನಾನು ಲೋಕಸಭಾ ಸದಸ್ಯ ಸ್ಥಾನಕ್ಕೆ ಟಿಕೆಟ್ ಆಕಾಂಕ್ಷಿಯಾಗಿರುತ್ತೇನೆ ಎಂದು ಪುನರುಚ್ಛರಿಸಿದರು.