Tuesday, December 3, 2024
Google search engine
Homeಮುಖಪುಟಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಮತಯಾಚನೆ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್

ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಮತಯಾಚನೆ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್

ಶಿಕ್ಷಣ ಸಂಸ್ಥೆಯೊಂದನ್ನು ನಡೆಸುತ್ತಾ ಶಿಕ್ಷಕರ ಕಷ್ಟ ಸುಖಗಳನ್ನು ಬಹಳ ಹತ್ತಿರದಿಂದ ಬಲ್ಲವನಾಗಿದ್ದೇನೆ. ಈ ಬಾರಿ ಶಿಕ್ಷಕರು ಸಹ ಬದಲಾವಣೆ ಬಯಸಿದ್ದಾರೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಹೇಳಿದ್ದಾರೆ.

ತುಮಕೂರಿನಲ್ಲಿ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತುಮಕೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಸುಮಾರು 45 ವಿಧಾನಸಭಾ ಕ್ಷೇತ್ರಗಳಿಗೆ ಆಗ್ನೇಯ ಶಿಕ್ಷಕರ ಕ್ಷೇತ್ರ ಹರಡಿದೆ ಎಂದರು.

ಕಳೆದ ಬಾರಿ ಆಗ್ನೇಯ ಪದವಿಧರರ ಚುನಾವಣೆಯ ವೇಳೆ ನನಗೆ ಎರಡನೇ ಸ್ಥಾನ ಪಡೆಯಲು ಮತದಾರರ ಕಾರಣ. ಕ್ಷೇತ್ರದ ದೊಡ್ಡದಾಗಿತ್ತು. ಎಲ್ಲಾ ಪದವಿಧರರು ಅವರು ಉದ್ಯೋಗದಲ್ಲಿರಲಿ, ಇಲ್ಲದಿರಲಿ ಮತ ಹಾಕುವ ಹಕ್ಕು ಪೆಡಯುತ್ತಾರೆ. ಆದರೆ ಶಿಕ್ಷಕರ ಕ್ಷೇತ್ರದಲ್ಲಿ ಶಿಕ್ಷಕರು ಮಾತ್ರ ಮತದಾರರಾಗಿದ್ದು, ಮತದಾರರ ಸಂಖ್ಯೆ ಕಡಿಮೆ ಇದೆ ಎಂದು ಹೇಳಿದರು.

ಕಳೆದ ಚುನಾವಣೆಯಲ್ಲಿ ಸೋಲು ಕಂಡಿರುವ ಹಿನ್ನೆಲೆಯಲ್ಲಿ ನನ್ನ ಮೇಲೆ ವಿಶೇಷ ಒಲವು ಇದೆ. ಎಲ್ಲಾ ಮತದಾರರನ್ನು ನೇರವಾಗಿ ಭೇಟಿಯಾಗಿ ಮತ ನೀಡುವಂತೆ ಮನವಿ ಮಾಡಲು ಅವಕಾಶ ಹೆಚ್ಚಿದೆ. ಅದು ನನಗೆ ಶ್ರೀರಕ್ಷೆಯಾಗಲಿದೆ. ಈ ಹಿನ್ನೆಲೆಯಲ್ಲಿಯೇ ಐದು ಜಿಲ್ಲೆಗಳ ಪ್ರವಾಸವನ್ನು ಆರಂಭಿಸಿರುವುದಾಗಿ ಡಿ.ಟಿ.ಶ್ರೀನಿವಾಸ್ ತಿಳಿಸಿದರು.

ಮಾಜಿ ಶಾಸಕಿ ಪೂರ್ಣೀಮ ಶ್ರೀನಿವಾಸ್ ಮಾತನಾಡಿ, ನಮ್ಮ ತಂದೆಯ ಕಾಲದಿಂದಲೂ ನಮ್ಮ ಕುಟುಂಬ ಶಿಕ್ಷಣದ ಜೊತೆ ಜೊತೆಗೆ ರಾಜಕಾರಣವನ್ನು ಮಾಡಿಕೊಂಡು ಬರುತ್ತಿದೆ. ಕಳೆದ ಬಾರಿಯ ಆಗ್ನೇಯ ಪದವಿಧರ ಕ್ಷೇತ್ರದಲ್ಲಿ ಅಲ್ಪ ಅಂತರದಲ್ಲಿ ಸೋತಿರುವ ಶ್ರೀನಿವಾಸ್ ಅವರ ಬಗ್ಗೆ ಕ್ಷೇತ್ರದ ಮತದಾರರಲ್ಲಿ ಒಲವಿದೆ. ಈ ಬಾರಿ ನಮಗೆ ಗೆಲುವು ದೊರೆಯಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ಇದೇ ವೇಳೆ ತುಮಕೂರಿನ ಕ್ಯಾತ್ಸಂದ್ರದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ ಮನೆಗೆ ಪೂರ್ಣೀಮ ಶ್ರೀನಿವಾಸ್ ದಂಪತಿ ಭೇಟಿ ನೀಡಿ ಸಹಕಾರ ಕೋರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular