Friday, November 22, 2024
Google search engine
Homeಮುಖಪುಟಪ್ರತಿಪಕ್ಷಗಳನ್ನು ಹತ್ತಿಕ್ಕಲು ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ - ಪ್ರಿಯಾಂಕ್ ಖರ್ಗೆ ಆರೋಪ

ಪ್ರತಿಪಕ್ಷಗಳನ್ನು ಹತ್ತಿಕ್ಕಲು ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ – ಪ್ರಿಯಾಂಕ್ ಖರ್ಗೆ ಆರೋಪ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 9-10 ವರ್ಷಗಳಿಂದ ವಿರೋಧ ಪಕ್ಷಗಳನ್ನು ಮುಗಿಸುವ ಸಂಚು ನಡೆಸುತ್ತಿದೆ. ವಿರೋಧ ಪಕ್ಷಗಳ ಧ್ವನಿ ಅಡಗಿಸಲು, ವಿರೋಧ ಪಕ್ಷದ ನಾಯಕರಿಂದ ಎದುರಾಗುವ ತೊಂದರೆ ದಮನಿಸಲು ಆಪರೇಷನ್ ಕಮಲ ಹಾಗೂ ಐಟಿ, ಇಡಿ, ಸಿಬಿಐ ಬೆದರಿಕೆ ಮೂಲಕ ಪ್ರಯತ್ನ ಮಾಡುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಎಐಸಿಸಿ ಅಧ್ಯಕ್ಷರಿಂದ ನಮ್ಮ ಪಿಸಿಸಿ ಅಧ್ಯಕ್ಷರವರೆಗೂ ಯಂಗ್ ಇಂಡಿಯಾ, ನ್ಯಾಷನಲ್ ಹೆರಾಲ್ಡ್ ಮತ್ತು ಅಕ್ರಮ ಆಸ್ತಿ ಪ್ರಕರಣಗಳನ್ನು ಬಳಸುತ್ತಿದೆ. ಇದರಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಈ ಪ್ರಕರಣದಲ್ಲಿ ನಮ್ಮ ನಾಯಕ ಡಿ.ಕೆ. ಶಿವಕುಮಾರ್ ಅವರಿಗೆ ಎಲ್ಲಾ ರೀತಿಯ ಕಿರುಕುಳ ನೀಡಿದರು.

ಚುನಾವಣೆ ಬಂದಾಕ್ಷಣ ವಿರೋಧ ಪಕ್ಷಗಳ ನಾಯಕರ ಮೇಲೆ ಮಾತ್ರ ಐಟಿ, ಇಡಿ ದಾಳಿಗಳಾಗುತ್ತವೆ. ಬಿಜೆಪಿಯ ಯಾವುದೇ ನಾಯಕರ ಮೇಲೆ ನಡೆಯುವುದಿಲ್ಲ. ಬಿಜೆಪಿ ನಾಯಕರು ಹಗಲು ದರೋಡೆ, ಕೊಲೆ ಮಾಡಿದರೂ ತನಿಖೆ ಮಾಡುವುದಿಲ್ಲ ಎಂದು ಗಂಭೀರ ಆರೋಪ ಮಾಡಿದರು.

ನಿನ್ನೆ ನಮ್ಮ ಸರ್ಕಾರ, ಡಿ.ಕೆ. ಶಿವಕುಮಾರ್ ಅವರ ಮೇಲಿನ ಪ್ರಕರಣವನ್ನು ಸಿಬಿಐ ವಿಚಾರಣೆಯಿಂದ ಹಿಂಪಡೆಯುವ ರಾಜ್ಯ ಸರ್ಕಾರದ ತೀರ್ಮಾನದ ಬಗ್ಗೆ ನಿನ್ನೆ ರಾತ್ರಿಯಿಂದ ಮಾಧ್ಯಮ ಹಾಗೂ ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಬಹಳ ಚರ್ಚೆಯಾಗುತ್ತಿದೆ. ಕಾನೂನು ವಿಚಾರವಾಗಿ ಸಾಕಷ್ಟು ಗೊಂದಲವಿದೆ. ಈ ಮಧ್ಯೆ ಬಿಜೆಪಿ ಹಲವು ತಪ್ಪು ಮಾಹಿತಿ ನೀಡುತ್ತಿದೆ ಎಂದು ಟೀಕಿಸಿದರು.

ಕಳೆದ ಬಿಜೆಪಿ ಸರ್ಕಾರ ಡಿ.ಕೆ. ಶಿವಕುಮಾರ್ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದು ಕಾನೂನು ಬಾಹೀರ. ಇದೊಂದು ರಾಜಕೀಯ ಪ್ರೇರಿತ ಸಂಚು. ವಿರೋಧ ಪಕ್ಷಗಳನ್ನು ಕಟ್ಟಿಹಾಕುವ ಪ್ರಯತ್ನವಾಗಿತ್ತು. ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಕಟ್ಟಿಹಾಕಲು ಬಿಜೆಪಿ ಮಾಡಿದ ಷಡ್ಯಂತ್ರ ಎಂದು ಆಪಾದಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular