Saturday, April 20, 2024
Google search engine
Homeಜಿಲ್ಲೆತುಮಕೂರು ಗ್ರಾಮಾಂತರ - ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ನೂರಾರು ಮುಖಂಡರು

ತುಮಕೂರು ಗ್ರಾಮಾಂತರ – ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ನೂರಾರು ಮುಖಂಡರು

ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿಯ ನೂರಾರು ಕಾರ್ಯಕರ್ತರು ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಯಿಂದ ಅಸಮಾಧಾನಗೊಂಡಿರುವ ಮುಖಂಡರು ಮಾಜಿ ಶಾಸಕ ಡಿ ಸಿ ಗೌರೀಶಂಕರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಗೂಳೂರು ಜಿಲ್ಲಾ ಪಂಚಾಯ್ತಿ ಜೆಡಿಎಸ್‌ ಉಸ್ತುವಾರಿ ಹಾಗೂ ಪ್ರಭಾವಿ ಜೆಡಿಎಸ್ ಮುಖಂಡ ಜಿ.ಪಾಲನೇತ್ರಯ್ಯ ಹಾಗೂ ಮಾಜಿ ಎಪಿಎಂಸಿ ಉಪಾಧ್ಯಕ್ಷೆ ನಂದಿನಿ, ಡೈರಿ ಅಧ್ಯಕ್ಷೆ ಎಸ್.ವಿಜಯಕುಮಾರಿ ನೇತೃತ್ವದಲ್ಲಿ ಮಾಜಿ ಶಾಸಕ ಡಿ ಸಿ ಗೌರೀಶಂಕರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಶಾಸಕ ಡಿ ಸಿ ಗೌರೀಶಂಕರ್, ಗ್ರಾಮಾಂತರ ಕ್ಷೇತ್ರ ನನ್ನ ಕರ್ಮಭೂಮಿ, ಬಳ್ಳಗೆರೆ ಬಳಿ ಮನೆ ಮಾಡಿ ನೆಲೆಸಿದ್ದೇನೆ. ಯಾವುದೇ ಕಾರಣಕ್ಕೂ ಕ್ಷೇತ್ರ ತೊರೆಯುವುದಿಲ್ಲ ಎಂದು ಕಾರ್ಯಕರ್ತರಿಗೆ ಭರವಸೆ ನೀಡಿದ್ದಾರೆ.

ಗ್ರಾಮಾಂತರ ಕ್ಷೇತ್ರದಲ್ಲಿ ನಾವು ಮೊದಲಿನಿಂದಲೂ ಬಿಜೆಪಿ ಜೊತೆ ಸೆಣಸಾಡಿದ್ದೇವೆ, ಈಗ ಏಕಾಏಕಿ ಬಿಜೆಪಿ ಜೊತೆ ಜೆಡಿಎಸ್ ವರಿಷ್ಟರು ಮೈತ್ರಿ ಮಾಡಿಕೊಂಡಿದ್ದಾರೆ, ಜಿಲ್ಲಾ ಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಚುನಾವಣೆಯಲ್ಲಿ ಹಾಗೂ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾವು ಯಾರಿಗೆ ಮತ ಕೇಳಬೇಕು, ನಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಹಾಗೂ ನಂಬಿರುವ ಕಾರ್ಯಕರ್ತರಿಗಾಗಿ ಕಾಂಗ್ರೆಸ್ ಪಕ್ಷ ಸೇರಿರುವುದಾಗಿ ಹೇಳಿದರು.

ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಪರಿಣಾಮ ಮಂಬರುವ ದಿನಗಳಲ್ಲಿ ಗ್ರಾಮಾಂತರ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದ ಚಿಹ್ನೆ ಹಿಡಿಯುವ ಕಾರ್ಯಕರ್ತರು ಯಾರೂ ಇರುವುದಿಲ್ಲ ಎಂದು ಭವಿಷ್ಯ ನುಡಿದರು.

ಗ್ರಾಮಾಂತರದಲ್ಲಿ ನಾನು ಶಾಸಕನಾಗಿದ್ದ ಅವಧಿಯಲ್ಲಿ ಬಿಜೆಪಿ ಸರ್ಕಾರವಿತ್ತು, ಕರೋನ ಆವರಿಸಿತು. ಇಂತಹ ಸಂದಿಗ್ದ ಪರಿಸ್ತಿತಿಯಲ್ಲಿ ಕೋಟ್ಯಂತರ ರೂ ಅನುದಾನ ತಂದು ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿಪಡಿಸಿದ್ದೇನೆ, ಈ ವೇಳೆಗಾಗಲೆ ಗ್ರಾಮಾಂತರ ಕ್ಷೇತ್ರದ ಎಲ್ಲಾ ಕೆರೆ ತುಂಬಿದ್ದವು, ಬಿಜೆಪಿ ಶಾಸಕ ಗೆದ್ದು ಆರು ತಿಂಗಳಾದರೂ ಸಹ ಕ್ಷೇತದ ಕಡೆ ತಿರುಗಿಯೂ ನೋಡಿಲ್ಲ ಎಂದು ವಾಗ್ದಾಳಿ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments