ಕಲಬುರಗಿ ಜಿಲ್ಲೆಯ ವಕೀಲ ಈರನಗೌಡ ಪಾಟೀಲರನ್ನು ನ್ಯಾಯಾಲಯದ ಕಲಾಪಕ್ಕೆ ಹಾಜರಾಗಲು ಬರುವ ಸಮಯದಲ್ಲಿ ಹಾಡು ಹಗಲೇ ಸಮವಸ್ತ್ರದ ಮೇಲೆ ಇರುವಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಿ ಕೊಲೆ ಮಾಡಿರುವ ಘಟನೆಯನ್ನು ಅಖಿಲ ಭಾರತ ವಕೀಲರ ಒಕ್ಕೂಟ AILU ಕರ್ನಾಟಕ ರಾಜ್ಯ ಸಮಿತಿ ಉಪಾಧ್ಯಕ್ಷ ಕೆ.ಕೋಟೇಶ್ವರ ರಾವ್ ಬಲವಾಗಿ ಖಂಡಿಸಿದ್ದಾರೆ.
ರಾಜ್ಯಾದ್ಯಂತ ವಕೀಲರ ಮೆಲೆ ಹಲ್ಲೆ, ದೌರ್ಜನ್ಯ, ಕೊಲೆ, ಕಿರುಕುಳ ವ ತೊಂದರೆ ನಿಡುವ ಕೃತ್ಯಗಳು ನಿರಂತರವಾಗಿ ನಡೆಯುತ್ತಿವೆ. ವಕೀಲರ ಹಾಗು ವಕೀಲರ ಕುಟುಂಬದ ಸದಸ್ಯರಿಗೆ ರಕ್ಷಣೆ ಇಲ್ಲವಾಗಿದೆ ಎಂದು ಆರೋಪಿಸಿದ್ದಾರೆ.
ವಕೀಲರ ರಕ್ಷಣಾ ಕಾಯ್ದೆ ತುಂಬಾ ಅಗತ್ಯವಿದೆ. ಆ ನಿಟ್ಟಿನಲ್ಲಿ ವಕೀಲರ ತಾಳ್ಮೆಗೆ ಒಂದು ಮಿತಿ ಇದೇ ದಯವಿಟ್ಟು ನಮ್ಮನ್ನಾಳುವ ಸರ್ಕಾರಗಳು ವಕೀಲರ ತಾಳ್ಮೆಯನ್ನು ಪರೀಕ್ಷಿಸುವ ದುಸ್ಸಾಹಸಕ್ಕೆ ಕೈ ಹಾಕದೆ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ನಿರಂತರವಾಗಿ ವಕೀಲರ ಮೇಲೆ ನಡೆಯುತ್ತಿರುವ ಮತ್ತು ನಡೆಸುತ್ತಿರುವ ಹಲ್ಲೆ, ದೌರ್ಜನ್ಯ, ಕೊಲೆ ಹಿಂಸೆಗಳು ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಲು ಸಾಕಾಗುತ್ತಿಲ್ಲವೆ ಇನ್ನೆಷ್ಟು ಕೊಲೆ, ಹತ್ಯೆ, ದೌರ್ಜನ್ಯಗಳು, ಹಿಂಸೆಗಳು ನಡೆಯಬೇಕು ಇದಕ್ಕೆ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರುವ ಮೂಲಕ ಇಂತಹ ಘಟನೆಗಳಿಗೆ ಕೊನೆ ಹಾಡಲು ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ತಾನು ವಕೀಲ ಸಮುದಾಯಕ್ಕೆ ಮಾತು ಕೊಟ್ಟ ಪ್ರಕಾರ ತತ್ತ ಕ್ಷಣ ಕರ್ನಾಟಕ ರಾಜ್ಯ ವಕೀಲರ ರಕ್ಷಣಾ ಕಾಯ್ದೆಯನ್ನು ಈಗ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಡನೆ ಮಾಡಿ ಚರ್ಚಿಸಿ ಅದನ್ನು ಜಾರಿ ಮಾಡಬೇಕು ಎಂದು ಹೇಳಿದ್ದಾರೆ.
ವಕೀಲರ ರಕ್ಷಣಾ ಕಾಯ್ದೆಗೆ ಒತ್ತಾಯಿಸಿ ಈಗಾಗಲೇ ಇಡೀ ರಾಜ್ಯದಲ್ಲಿ ವಕೀಲರು ಹಲವಾರು ವರ್ಷಗಳಿಂದ ನಿರಂತರವಾಗಿ ರಕ್ಷಣಾ ಕಾಯ್ದೆ ಜಾರಿಗೆ ಒತ್ತಾಯಿಸಿ ಹೋರಾಟ ಮಾಡುತ್ತಾ ಬಂದಿದ್ದು, ಆ ಎಲ್ಲಾ ಹೋರಾಟಗಳಲ್ಲಿ ಅಖಿಲ ಭಾರತ ವಕೀಲರ ಒಕ್ಕೂಟ AILU ಭಾಗಿಯಾಗಿದ್ದು, ರಾಜ್ಯ ಸರ್ಕಾರ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ತರಲು ವಿಫಲವಾದಲ್ಲಿ ಮತ್ತೆ ರಾಜ್ಯದ ಎಲ್ಲಾ ವಕೀಲರು ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಮುತ್ತಿಗೆ ಹಾಕುವ ಮತ್ತು ಧರಣಿ ಹೋರಾಟ ಮಾಡುವ ಎಚ್ಚರಿಕೆಯನ್ನು ಕೂಡ ನೀಡಿದ್ದಾರೆ.
ಆದ್ದರಿಂದ ಬೆಳಗಾವಿಯಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತರಬೇಕೆಂದು ಅಖಿಲ ಭಾರತ ವಕೀಲರ ಒಕ್ಕೂಟ AILU ಕರ್ನಾಟಕ ರಾಜ್ಯ ಸಮಿತಿ ಈ ಮೂಲಕ ಒತ್ತಾಯಿಸುತ್ತದೆ ಎಂದಿದ್ದಾರೆ.


