Thursday, November 21, 2024
Google search engine
Homeಮುಖಪುಟಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಪೊರಕೆ ಹಿಡಿದು ಕಸ ಗುಡಿಸಿದ ಅತಿಥಿ ಉಪನ್ಯಾಸಕರು

ಸೇವೆ ಕಾಯಂಗೊಳಿಸುವಂತೆ ಆಗ್ರಹಿಸಿ ಪೊರಕೆ ಹಿಡಿದು ಕಸ ಗುಡಿಸಿದ ಅತಿಥಿ ಉಪನ್ಯಾಸಕರು

ಸೇವೆ ಖಾಯಂಗೊಳಿಸುವುದು ಹಾಗೂ ಸೇವಾ ಭದ್ರತೆಗೆ ಆಗ್ರಹಿಸಿ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು ಪೊರಕೆ ಹಿಡಿದು ಜಿಲ್ಲಾಧಿಕಾರಿ ಕಚೇರಿಯನ್ನು ಸ್ವಚ್ಛಗೊಳಿಸುವ ಮೂಲಕ ವಿಶಿಷ್ಟವಾಗಿ ಪ್ರತಿಭಟನೆ ನಡೆಸಿದರು.

ತುಮಕೂರಿನ ಜಿಲ್ಲಾಧಿಕಾರಿ ಕಚೇರಿ ಎದುರು ಕಳೆದ 20ದಿನಗಳಿಂದಲೂ ಧರಣಿ ನಡೆಸುತ್ತಿರುವ ಅತಿಥಿ ಉಪನ್ಯಾಸಕರು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪೊರಕ್ಕೆ ಹಿಡಿದು ಸರ್ಕಾರಿ ಕಚೇರಿಯ ಕಸ ಗುಡಿಸುವ ಮೂಲಕ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದರು.

ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾಧ್ಯಕ್ಷ ಡಾ.ಧರ್ಮವೀರ ಮಾತನಾಡಿ ಹಲವು ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ನಮ್ಮ ನ್ಯಾಯಯುತ ಧ್ವನಿಗೂ ಕವಿಗೊಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ, ಲಕ್ಷಾಂತರ ಮಕ್ಕಳ ಭವಿಷ್ಯವನ್ನು ರೂಪಿಸಿದ್ದೇವೆ, ಆದರೆ ನಮ್ಮ ಜೀವನಕೊಂದು ಭದ್ರತೆ ಇಲ್ಲದಂತಾಗಿ, ನಮ್ಮ ಭವಿಷ್ಯವೇ ಮಂಕು ಕವಿದೆ. ಎಷ್ಟೋ ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿವೆ, ಆದ್ದರಿಂದ ಕೂಡಲೇ ಕಾಯಮಾತಿಗೆ ಕ್ರಮ ಕೈಗೊಳ್ಳಬೇಕೆ ಎಂದು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕರ ಗೈರು ಹಾಜರಿಯಿಂದ ರಾಜ್ಯಾದ್ಯಂತ ಓದುತ್ತಿರುವ ಲಕ್ಷಾಂತರ ಮಕ್ಕಳಿಗೆ ತರಗತಿಗಳು ನಡೆಯುತ್ತಿಲ್ಲ, ಹೀಗಾಗಿ ವಿದ್ಯಾರ್ಥಿಗಳ ಕಲಿಕೆಗೆ ಹಿನ್ನಡೆಯಾಗುತ್ತಿದೆ, ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಬೇರೆ ಉದ್ಯೋಗಗಳಿಗೂ ಹೋಗಲು ಸಾಧ್ಯವಾಗುತ್ತಿಲ್ಲ, ಸರ್ಕಾರಿ ನೇಮಕಾತಿಗೆ ನಿಗದಿಪಡಿಸಿದ ವಯೋಮಿತಿ ಮೀರಿರುವುದರಿಂದ ಕಾಯಮಾತಿಮಾಡಬೇಕೆಂದು ಒತ್ತಾಯಿಸಿದರು.

ಅತಿಥಿ ಉಪನ್ಯಾಸಕಿ ಡಾ.ಜಾಲಜಾಕ್ಷಿ ಮಾತನಾಡಿ ಪಂಜಾಬ್, ತೆಲಂಗಾಣ, ತಮಿಳುನಾಡು, ದೆಹಲಿ, ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಿದ್ದು. ರಾಜ್ಯ ಸರ್ಕಾರ ನಮ್ಮನ್ನು ಕಾಯಂ ಮಾಡಿ ಆದೇಶ ಹೊರಡಿಸಿದರೆ ನಮಗೆ ಕೊಡಬೇಕಾದ ವೇತನವನ್ನು ಯುಜಿಸಿಯೇ ಭರಿಸುತ್ತದೆ. ರಾಜ್ಯ ಸರ್ಕಾರ ಕೇವಲ 25ರಷ್ಟು ವೇತನವನ್ನು ಮಾತ್ರ ಕೊಡಬೇಕಾಗುತ್ತದೆ ಆದ್ದರಿಂದ ರಾಜ್ಯ ಸರ್ಕಾರಕ್ಕೆ ಯಾವುದೇ ಹೊರೆಯಾಗುವುದಿಲ್ಲ ಎಂದು ಹೇಳಿದರು.

ಪ್ರತಿಭಟನೆ ಧರಣಿಯಲ್ಲಿ ಅತಿಥಿ ಉಪನ್ಯಾಸಕರಾದ ಅಂಬಿಕಾ.ಕೆ.ಆರ್, ಸವಿತ, ವಿನೂತಾ, ಡಾ.ಶಿವಣ್ಣ ತಿಮ್ಲಾಪುರ, ಡಾ.ಮಲ್ಲಿಕಾರ್ಜನಯ್ಯ, ಎಂ.ಟಿ, ಶಂಕರ ಹಾರೋಗೆರೆ, ಗಿರೀಶ್, ನಟರಾಜು, ಶಶಿಧರ್, ಮಾದೇವಯ್ಯ, ವೇದಮೂರ್ತಿ, ಕಿರಣ ಕುಮಾರ್, ಜಯರಾಮು, ನಟರಾಜು,ಶಿಲ್ಪ,ಶ್ವೇತ,ನಾಗೇಂದ್ರ ಮೊದಲಾದವರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular