Friday, November 22, 2024
Google search engine
Homeಮುಖಪುಟಕೊರೊನ - ಭಯ ಬೇಡ, ಎಚ್ಚರಿಕೆ ವಹಿಸಿ - ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊರೊನ – ಭಯ ಬೇಡ, ಎಚ್ಚರಿಕೆ ವಹಿಸಿ – ಮುಖ್ಯಮಂತ್ರಿ ಸಿದ್ದರಾಮಯ್ಯ

ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯವಿಲ್ಲ. ಆದರೆ ಎಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ತಾಂತ್ರಿಕ ಸಲಹಾ ಸಮಿತಿಯ ಜೊತೆ ಸಭೆ ನಡೆಸಿದ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ 92 ಕೊರೊನ ಪ್ರಕರಣಗಳು ದಾಖಲಾಗಿವೆ. ಎಲ್ಲರಿಗೂ ಸೋಂಕು ಇರುವುದು ಪರೀಕ್ಷೆ ನಡೆಸಿರುವುದರಿಂದ ಗೊತ್ತಾಗಿದೆ ಎಂದು ತಿಳಿಸಿದರು.

ರಾಜ್ಯದ ಒಟ್ಟು ಕೊರೊನಾ ಪ್ರಕರಣಗಳಲ್ಲಿ 82 ಪ್ರಕರಣಗಳು ಬೆಂಗಳೂರಿನಲ್ಲಿ ದಾಖಲಾಗಿವೆ. ಬಳ್ಳಾರಿಯಲ್ಲಿ ಮೂರು, ಮಂಡ್ಯದಲ್ಲಿ ಒಂದು ಪ್ರಕರಣ ದಾಖಲಾಗಿದೆ. ಇದರಲ್ಲಿ 20ಕ್ಕೂ ಹೆಚ್ಚು ಕೊರೊನ ಪೀಡಿತರು ಮನೆಯಲ್ಲಿ ಐಸೋಲೇಷನ್ ಇದ್ದಾರೆ. ಕೆಲವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮತ್ತು 7 ಸೋಂಕಿತರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ ಎಂದು ವಿವರಿಸಿದರು.

ಜನಸಂದಣಿ ಇರುವ ಕಡೆ ಹೋಗುವವರು ಮಾಸ್ಕ್ ಧರಿಸಿಕೊಂಡು ಹೋದರೆ ಒಳ್ಳೆಯದು. ಅದರಿಂದ ಸೋಂಕು ಹರಡುವುದನ್ನು ತಡೆಯಬಹುದು ಎಂದು ತಿಳಿಸಿದರು.

60 ವರ್ಷ ಮತ್ತು ಅದಕ್ಕೂ ಮೇಲ್ಪಟ್ಟ ವಯಸ್ಸಿನವರು ಮಾಸ್ಕ್ ಹಾಕುವುದು ಕಡ್ಡಾಯಗೊಳಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಗಳು ಇರುವವರು, ಕೆಮ್ಮು, ನೆಗಡಿ, ಜ್ವರ ಇರುವವರು ಪರೀಕ್ಷೆ ಮಾಡಿಸಿಕೊಳ್ಳಬೇಕು ಮತ್ತು ಮಾಸ್ಕ್ ಧರಿಸಬೇಕು ಎಂದು ಹೇಳಿದರು.

ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಗುಂಪು ಸೇರುವ ಸಂದರ್ಭದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ. ಸಂಭ್ರಮದ ಜೊತೆಗೆ ನಿಮ್ಮ ಆರೋಗ್ಯದ ಕಾಳಜಿಯನ್ನು ವಹಿಸಿ. ಸುರಕ್ಷಿತವಾಗಿರಿ ಎಂದು ಸಲಹೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular