Friday, November 22, 2024
Google search engine
Homeಜಿಲ್ಲೆಪ್ರಚೋದನಾಕಾರಿ ಹೇಳಿಕೆ - ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಮಕ್ಕೆ ತಾಜುದ್ದೀನ್ ಆಗ್ರಹ

ಪ್ರಚೋದನಾಕಾರಿ ಹೇಳಿಕೆ – ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕ್ರಮಕ್ಕೆ ತಾಜುದ್ದೀನ್ ಆಗ್ರಹ

ಸಂಘಪರಿವಾರದ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷಕಾರುವ ಹೇಳಿಕೆ ನೀಡಿದ್ದಾರೆ. ಕಲ್ಲಡ್ಕ ಪ್ರಭಾಕರ್ ಭಟ್ ರಾಜ್ಯದಲ್ಲಿ ಕೋಮು ದ್ವೇಷದ ಭಾಷಣ ಮಾಡಿ ಶಾಂತಿ ಸುವ್ಯವಸ್ಥೆ ಕದಡುವ ನಿರಂತರ ಪ್ರಯತ್ನದಲ್ಲಿದ್ದು ಈ ಮುಂಚೆಯೂ ಕೂಡ ಅವರ ಹಲವು ಭಾಷಣದಲ್ಲಿ ಮುಸ್ಲಿಂ ಸಮುದಾಯವನ್ನು ಉದ್ದೇಶಿಸಿ ದ್ವೇಷ ಭಾಷಣ ಮಾಡಿದ್ದಾರೆ. ಹೀಗಾಗಿ ಅವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಪ್ ಸಿವಿಲ್ ರೈಟ್ಸ್ ತುಮಕೂರು ಜಿಲ್ಲಾಧ್ಯಕ್ಷ ತಾಜುದ್ದೀನ್ ಶರೀಫ್ ಒತ್ತಾಯಿಸಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ತಾಜುದ್ದೀನ್ ಶರೀಫ್, ಧಾರ್ಮಿಕ ಸ್ವಾತಂತ್ರ್ಯದ ಅನುಗುಣವಾಗಿ ವಿದ್ಯಾರ್ಥಿನಿಯರು ಧರಿಸುವ ಶಿರವಸ್ತ್ರದ ಕುರಿತು ಆಧಾರ ರಹಿತವಾಗಿ ಮಾತನಾಡುತ್ತ ಮುಸ್ಕಾನ್ ಎಂಬ ವಿದ್ಯಾರ್ಥಿನಿಯ ಕುರಿತು ಮಾನಹಾನಿಕಾರ ಹೇಳಿಕೆ ನೀಡುತ್ತ ಇಡೀ ಮುಸ್ಲಿಂ ಸಮುದಾಯ ಮತ್ತು ಮಹಿಳೆಯರ ಕುರಿತು ದ್ವೇಷಕಾರುವ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಹೇಳಿಕೆಗಳನ್ನು ನೀಡಿರುವುದನ್ನು ಮಾಧ್ಯಮಗಳು ವರದಿ ಮಾಡಿವೆ ಎಂದು ಹೇಳಿದ್ದಾರೆ.

ಮಾಧ್ಯಮಗಳ ವರದಿಯ ಪ್ರಕಾರ ಮುಸ್ಕಾನ್, ನೀನು ಮನೆಯಲ್ಲಿ ಅಥವಾ ಮಸೀದಿಯಲ್ಲಿ ಅಲ್ಲಾಹು ಅಕ್ಬರ್ ಎಂದು ಹೇಳಬೇಕು. ಈ ದೇಶದಲ್ಲಿ ಹೇಳಬೇಕಿರೋದು ರಾಮ ನಾಮ. ಅಲ್ಲಾಹು ಅಕ್ಬರ್ ಎನ್ನಬೇಕಾದರೆ ನೀವು ಮುಸಲ್ಮಾನ ದೇಶಕ್ಕೆ ಹೋಗಿ. ಮುಸ್ಕಾನ್‌ಗೆ ಶಹಭಾಷ್‌ಗಿರಿ ಕೊಟ್ಟಿದ್ದು ಅಲ್ ಖೈದಾ ಭಯೋತ್ಪಾದಕ ಸಂಘಟನೆಯ ಸದಸ್ಯ. ಮುಸ್ಕಾನ್‌ಗೂ ಕೂಡ ಅಲ್ ಖೈದಾ ಜೊತೆ ಸಂಪರ್ಕ ಇದೆ. ತಾಕತ್ತಿದ್ದರೆ ಮುಸ್ಕಾನ್ ಮತ್ತೆ ಶಾಲೆಗೆ ಹೋಗುವ ಕೆಲಸ ಮಾಡಲಿ. ಇದನ್ನು ನೀವು ಹಿಂದೂಗಳ ದೌರ್ಬಲ್ಯ ಅಂದುಕೊಳ್ಳಬೇಡಿ. ನಾವು ಒಟ್ಟಾಗಿರಲು ಬಯಸುತ್ತೇವೆ” ಎಂದು ಕೋಮು ಪ್ರಚೋದಕವಾಗಿ ಹೇಳಿಕೆ ನೀಡಿದ್ದಾರೆ ಎಂದಿದ್ದಾರೆ..

ಇಡೀ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷ ಭಾಷಣ ಮಾಡಿರುವ ಕಲ್ಲಡ್ಕ ಭಟ್, “ಮುಸಲ್ಮಾನ್ ಹುಡುಗರು ಅಷ್ಟೇ ಅಲ್ಲ, ಮುಸ್ಲಿಂ ಮಹಿಳೆಯರು ಮತಾಂತರ ಮಾಡುತ್ತಿದ್ದಾರೆ. ನಿಮ್ಮ ಮುಸ್ಲಿಂ ಸಮಾಜದಲ್ಲಿ ಹುಡುಗಿಯರು ಇಲ್ಲವಾ. ಹಿಂದೂ ಹುಡುಗಿಯರನ್ನು ಯಾಕೆ ಟಾರ್ಗೆಟ್ ಮಾಡುತ್ತೀರಾ. ಮತಾಂತರ ಮಾಡಲು ಲವ್ ಜಿಹಾದ್ ಪ್ರಯತ್ನಗಳಾಗುತ್ತಿವೆ ಎಂದು ಎಚ್ಚರಿಸಿದರು. ಮುಸ್ಲಿಮರಿಗೆ ಈ ಹಿಂದೆ ತಲಾಕ್ ಹೇಳುವ ಅವಕಾಶ ಇತ್ತು. ಮೋದಿ ಸರ್ಕಾರದಿಂದ ತ್ರಿವಳಿ ತಲಾಕ್ ಇಲ್ಲದಾಗಿದೆ. ಮುಸಲ್ಮಾನ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡ ಇರಲಿಲ್ಲ. ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಮೋದಿ ಸರ್ಕಾರ” ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದಾರೆ.

ಮುಸ್ಲಿಮರ ಸಂಖ್ಯೆ ಹೆಚ್ಚಾಗುತ್ತಿದೆ. ಈ ದೇಶವನ್ನು ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಂರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕು. ನಮ್ಮ ದೇಶವನ್ನು ಉಳಿಸಬೇಕು ಎಂದು ಹೇಳಿ ಸಾರ್ವಜನಿಕರ ನಡುವೆ ಧಾರ್ಮಿಕ ಸಂಘರ್ಷ ಹುಟ್ಟು ಹಾಕಲು ಯತ್ನ ನಡೆಸಿದ್ದಾರೆ.

ಈ ಎಲ್ಲ ಹೇಳಿಕೆಗಳಲ್ಲಿ ಆಧಾರ ರಹಿತವಾಗಿ ಕಲ್ಲಡ್ಕ ಪ್ರಭಾಕರ್ ಭಟ್ ಇಡೀ ಮುಸ್ಲಿಂ ಸಮಯದಾಯದ ವಿರುದ್ಧ ಪ್ರಮುಖವಾಗಿ ಮಹಿಳೆಯರ ವಿರುದ್ಧ ದ್ವೇಷ ಭಾಷಣ ಮಾಡುತ್ತ ಜನರಲ್ಲಿ ಆತಂಕ ಸೃಷ್ಟಿಸುವ, ಗಲಭೆ ಸೃಷ್ಟಿಸುವ ಪ್ರಯತ್ನ ನಡೆಸುತ್ತಿದ್ದು ಅವರ ವಿರುದ್ಧ ಕೂಡಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕಾನೂನು ರೀತ್ಯ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular