Friday, November 22, 2024
Google search engine
Homeಮುಖಪುಟಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಸಿಎಂ ಜೊತೆ ಮಾತನಾಡುತ್ತೇನೆ - ಸಭಾಧ್ಯಕ್ಷ ಬಸವರಾಜ ಹೊರಟ್ಟಿ

ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಸಿಎಂ ಜೊತೆ ಮಾತನಾಡುತ್ತೇನೆ – ಸಭಾಧ್ಯಕ್ಷ ಬಸವರಾಜ ಹೊರಟ್ಟಿ

ಸೇವೆ ಕಾಯಂಗೊಳಿಸುವಂತೆ ಒತ್ತಾಯಿಸಿ ಧರಣಿ ನಡೆಸುತ್ತಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭಿಸಿದ್ದಾರೆ. ಸಿದ್ದಗಂಗಾ ಮಠದ ಸಿದ್ದಲಿಂಗ ಶ್ರೀಗಳು ಪಾದಯಾತ್ರೆಗೆ ಚಾಲನೆ ನೀಡಿದರು. ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತುಕತೆ ವಿಫಲವಾದ ಹಿನ್ನೆಲೆಯಲ್ಲಿ ಅತಿಥಿ ಉಪನ್ಯಾಸಕರು ಪಾದಯಾತ್ರೆ ನಡೆಸುತ್ತಿದ್ದು ಇವರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬೆಂಬಲ ಸೂಚಿಸಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಬೇಡಿಕೆಗಳ ನ್ಯಾಯಯುತವಾಗಿದ್ದು, ಈ ಸಂಬಂಧ ಮುಖ್ಯಮಂತ್ರಿಗಳ ಬಳಿ ಚರ್ಚೆ ನಡೆಸುತ್ತೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠದಿಂದ ಬೆಂಗಳೂರಿಗೆ ಪಾದಯಾತ್ರೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಂಡ ಬಸವರಾಜ ಹೊರಟ್ಟಿ ಮಾರ್ಗ ಮಧ್ಯೆ ತುಮಕೂರಿನ ಜಾಸ್ ಟೋಲ್ ಸಮೀಪ ಅತಿಥಿ ಉಪನ್ಯಾಸಕರೊಂದಿಗೆ ಮಾತನಾಡಿದ ಅವರು, ಬೇಡಿಕೆಗಳ ಈಡೇರಿಕೆ ಕುರಿತು ಸರ್ಕಾರ ಗಮನ ಸೆಳೆಯುವುದಾಗಿ ಭರವಸೆ ನೀಡಿದರು.

ಅತಿಥಿ ಉಪನ್ಯಾಸಕರ ಬೇಡಿಕೆಗಳ ಬಗ್ಗೆ ನನಗೆ ಮಾಹಿತಿ ಇದೆ. ಹೀಗಾಗಿ ಸಚಿವರು ಮತ್ತು ಕಾರ್ಯದರ್ಶಿಗಳ ಜೊತೆ ಮಾತನಾಡಿದ್ದೇನೆ. ಮುಖ್ಯಮಂತ್ರಿಗಳ ಜೊತೆ ಮಾತನಾಡುವಂತೆ ಹೇಳಿದ್ದಾರೆ. ಹಾಗಾಗಿ ಮುಖ್ಯಮಂತ್ರಿಗಳ ಜೊತೆ ಮಾತನಾಡುವುದಾಗಿ ಹೇಳಿದರು.

ನಾನು ಸಚಿವನಾಗಿದ್ದಾಗ 1300 ಜನ ಅರೆಕಾಲಿಕ ಉಪನ್ಯಾಸಕರನ್ನು ಕಾಯಂಗೊಳಿಸಿದ್ದೇನೆ. ಅದರಂತೆ ನಿಮ್ಮ ಬೇಡಿಕೆಗಳೂ ನ್ಯಾಯಯುತವಾಗಿವೆ. ಹಲವು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವ ನಿಮ್ಮ ಸಂಕಟ, ನೋವು ನನಗೆ ತಿಳಿದಿದೆ. ಶಿಕ್ಷಕರನ್ನು ಬೀದಿಗೆ ತಳ್ಳಬಾರದು. ನಿಮ್ಮ ಬೆಂಬಲಕ್ಕೆ ನಾನು ಇದ್ದೇನೆ ಎಂದು ಅಭಯ ನೀಡಿದರು.

ಜನವರಿ 5 ಇಲ್ಲವೇ 6ರಂದು ಮುಖ್ಯಮಂತ್ರಿಗಳ ಭೇಟಿಗೆ ಸಮಯ ಕೇಳಲಾಗಿದೆ. ಸಿಎಂ ಭೇಟಿಗೆ ಅವಕಾಶ ಮಾಡಿಕೊಡುತ್ತೇವೆ ಎಂಬ ಭರವಸೆ ಸಿಕ್ಕಿದೆ. ನೀವು ಉರಿಬಿಸಿಲಿನಲ್ಲಿ ಪಾದಯಾತ್ರೆ ನಡೆಸುತ್ತಿದ್ದೀರಿ. ನಿಮ್ಮ ಬೇಡಿಕೆಗಳ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಮತ್ತು ಬೇಡಿಕೆಗಳನ್ನು ಈಡೇರಿಸುವಂತೆ ಹೇಳಲಾಗುವುದು ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular