ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಜನಪರ ಚಿಂತಕ ಕೆ.ದೊರೈರಾಜ್ ಒತ್ತಾಯಿಸಿದ್ದಾರೆ.
ಬೆಂಗಳೂರಿಗೆ ಪಾದಯಾತ್ರೆ ನಡೆಸುತ್ತಿರುವ ಅತಿಥಿ ಉಪನ್ಯಾಸಕರಿಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ ಅವರು, ಅತಿಥಿ ಉಪನ್ಯಾಸಕರ ಹೋರಾಟಕ್ಕೆ ಜನಪರ ಸಂಘಟನೆಗಳ ಒಕ್ಕೂಟ ಬೆಂಬಲ ನೀಡುತ್ತದೆ ಎಂದು ಹೇಳಿದ್ದಾರೆ.
ಇಂದು ಬಡವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ಸಿಗುತ್ತದೆ ಎಂದರೆ ಅದು ಅತಿಥಿ ಉಪನ್ಯಾಸಕರಿಂದ. ಹೀಗಾಗಿ ಸರ್ಕಾರ ಅವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.
ಇಂದು ಶಿಕ್ಷಣ ವ್ಯವಸ್ಥೆಯೂ ಉಳಿಯಬೇಕು. ಎಲ್ಲರಿಗೂ ಶಿಕ್ಷಣ ಸಿಗಬೇಕು ಅಂದರೆ ಅತಿಥಿ ಉಪನ್ಯಾಸಕರ ಹೋರಾಟವನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು. ಸರ್ಕಾರ ಇವರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.
ಅತಿಥಿ ಉಪನ್ಯಾಸಕರು ವಿದ್ಯಾರ್ಥಿಗಳು ಮತ್ತು ಸಮಾಜಕ್ಕೆ ತ್ಯಾಗವನ್ನು ಮಾಡಿದ್ದಾರೆ. ಹೀಗಾಗಿ ಅವರ ಬೇಡಿಕೆಗಳನ್ನು ಈಡೇರಿಸಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸಲಹೆ ನೀಡಿದರು.