Sunday, September 8, 2024
Google search engine
Homeಮುಖಪುಟಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಳ್ಳಲಿ - ಅತಿಥಿ ಉಪನ್ಯಾಸಕರ ಒತ್ತಾಯ

ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಳ್ಳಲಿ – ಅತಿಥಿ ಉಪನ್ಯಾಸಕರ ಒತ್ತಾಯ

ಸರ್ಕಾರದ ಪರ್ಯಾಯ ವ್ಯವಸ್ಥೆಯ ಬೆದರಿಕೆ ಅಸ್ತ್ರಕ್ಕೆ ಜಗ್ಗದ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮುಂದುವರಿಸಿದ್ದಾರೆ.

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಸಾವಿರಾರು ಅತಿಥಿ ಉಪನ್ಯಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಸೇವೆ ಕಾಯಂಗೊಳಿಸಲು ಸೂಕ್ತ ಯೋಜನೆ ರೂಪಿಸುವುದಾಗಿ ಕಾಂಗ್ರೆಸ್ ಪಕ್ಷ ಕಳೆದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ. ಹಾಗಾಗಿ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ನಡೆದುಕೊಳ್ಳುವಂತೆ ನಾವು ಸರ್ಕಾರಕ್ಕೆ ಕೇಳುತ್ತಿದ್ದೇವೆ. ಹತ್ತು ಹದಿನೈದು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನಮಗೆ ಭದ್ರತೆ ಕೊಡಿ ಎಂದು ಕೇಳುವುದು ನಮ್ಮ ಹಕ್ಕು. ಅದಕ್ಕಾಗಿ ಕಳೆದ ಒಂದು 39 ದಿನಗಳಿಂದ ತರಗತಿ ಬಹಿಸ್ಕರಿಸಿ ನಾವು ಮುಷ್ಕರ ನಡೆಸುತ್ತಿದ್ದರೂ ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಿಲ್ಲ. ಹಾಗಾಗಿ ಹೋರಾಟ ಕೈಗೊಳ್ಳಲಾಗಿದೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.

ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಬಹುತೇಕ ಅತಿಥಿ ಉಪನ್ಯಾಸಕರ ಕರ್ತವ್ಯಗಳನ್ನು ಅವಲಂಬಿಸಿದ್ದು, ಸುಮಾರು ಹತ್ತಾರು ವರ್ಷಗಳಿಂದ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಾ ಬಂದಿರುವ ಅತಿಥಿ ಉಪನ್ಯಾಸಕರ ಬದುಕು ಅತಂತ್ರವಾಗಿದೆ. ಅತಿಥಿ ಎಂಬ ಅನಿಷ್ಟ ಪದ್ಧತಿ ಅಂತ್ಯಗೊಳಿಸಿ ಸೇವಾ ಕಾಯಂಗೊಳಿಸಬೇಕು ಎಂದು ಒತ್ತಾಯಿಸಿದರು.

ತುಮಕೂರು ಜಿಲ್ಲೆ ತಿಪಟೂರು ಕಾಲೇಜಿನ ಅತಿಥಿ ಉಪನ್ಯಾಸಕ ಲೋಕೇಶ್ ಉಪವಾಸ ಮಾಡುತ್ತಾ ಬಿದ್ದುಹೋಗಿ ಆಸ್ಪತ್ರೆ ಸೇರಿದ್ದಾರೆ ಎಂದು ತಿಳಿದುಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular