Thursday, September 19, 2024
Google search engine
Homeಮುಖಪುಟಶಾಸಕರು, ಹೈಕಮಾಂಡ್ ಬೆಂಬಲ ಇರುವವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ - ಸಚಿವ ಕೆ.ಎನ್.ರಾಜಣ್ಣ

ಶಾಸಕರು, ಹೈಕಮಾಂಡ್ ಬೆಂಬಲ ಇರುವವರೆಗೆ ಸಿದ್ದರಾಮಯ್ಯ ಮುಖ್ಯಮಂತ್ರಿ – ಸಚಿವ ಕೆ.ಎನ್.ರಾಜಣ್ಣ

ಎಲ್ಲಿಯವರೆಗೆ ಶಾಸಕರ ಬೆಂಬಲ, ಹೈಕಮಾಂಡ್ ಆಶೀರ್ವಾದ ಇರುತ್ತದೆಯೋ ಅಲ್ಲಿಯವರೆಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಅವರು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಏಕೆ 5 ವರ್ಷ ಪೂರೈಸಬಾರದು ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳಿಗೆ ಶಾಸಕರ ಬೆಂಬಲ, ಪಕ್ಷದ ಹೈಕಮಾಂಡ್ ಆಶೀರ್ವಾದ ಎಲ್ಲಿಯವರೆಗೆ ಇರುತ್ತದೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿಗಳಾಗಿ ಇರುತ್ತಾರೆ ಎಂದರು.

ಈಗಾಗಲೇ ಮೂರು ಡಿಸಿಎಂ ನೇಮಕದ ವಿಚಾರವನ್ನು ಪಕ್ಷದ ಉಸ್ತುವಾರಿ ಸುರ್ಜೇವಾಲಾ ಅವರ ಮುಂದೆ ಪ್ರಸ್ತಾಪ ಮಾಡಿದ್ದೇವೆ. ಇನ್ನು ಮುಂದೆ ಈ ಸಂಬಂಧ ಯಾರು ತೀರ್ಮಾನ ತೆಗೆದುಕೊಳ್ಳುತ್ತಾರೋ ಅವರ ಮುಂದೆ ಈ ವಿಚಾರ ಪ್ರಸ್ತಾಪ ಮಾಡಿದರೆ ಸೂಕ್ತ ಎನ್ನುವುದು ನನ್ನ ಭಾವನೆ ಎಂದರು.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೂರು ಡಿಸಿಎಂ ಬೇಡಿಕೆ ವಿಚಾರ ಗೊತ್ತಿಲ್ಲ ಎಂದು ಹೇಳಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಗೊತ್ತಿಲ್ಲ ಎಂದರೆ ಹೇಗೆ, ಎಲ್ಲ ಮಾಧ್ಯಮಗಳಲ್ಲಿ ಬಿತ್ತರವಾಗಿದೆ ಎಂದು ತಿಳಿಸಿದರು.

ದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಸೋನಿಗಾಯಗಾಂಧಿ, ರಾಹುಲ್‌ಗಾಂಧಿಯವರ ಮುಂದೆ ಈ ವಿಚಾರದ ಬಗ್ಗೆ ಪ್ರಸ್ತಾಪ ಮಾಡುತ್ತೇವೆ. ನಂತರ ಅವರು ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಮೂರು ಡಿಸಿಎಂ ನೇಮಕದ ವಿಚಾರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರಲ್ಲಾ ಎಂಬ ಪ್ರಶ್ನೆಗೆ ಹೊಸದಾಗಿ ಆಗುವ ಡಿಸಿಎಂಗಳು ಡಿ.ಕೆ. ಶಿವಕುಮಾರ್ ಅವರ ಫೋರ್ಟ್ ಪೋಲಿಯೋ ಕಿತ್ತೊಳ್ತಾರಾ ಎಂದು ಪ್ರಶ್ನಿಸಿದರು.
ಮೂರು ಡಿಸಿಎಂ ನೇಮಕ ಬೇಡಿಕೆಗೆ ಯಾವ ಸಚಿವರೂ ವಿರೋಧ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular