Thursday, September 19, 2024
Google search engine
Homeಮುಖಪುಟಮತ್ತೆ ಕಾಂಗ್ರೆಸ್ ಸೇರ್ಪಡೆಗೆ ಮುಂದಾದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ

ಮತ್ತೆ ಕಾಂಗ್ರೆಸ್ ಸೇರ್ಪಡೆಗೆ ಮುಂದಾದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ

ಮಾಜಿ ಸಂಸದ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಮುದ್ದಹನುಮೇಗೌಡ ಅವರು ಮತ್ತೆ ಕಾಂಗ್ರೆಸ್ ಸೇರ್ಪಡೆಗೆ ಒಲವು ತೋರಿದ್ದಾರೆ. ಇಂದು ಕಾಂಗ್ರೆಸ್ ನಾಯಕರನ್ನು ಬೇಟಿ ಮಾಡಿ ಪಕ್ಷ ಸೇರ್ಪಡೆಗೆ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಂಗಳೂರಿನಲ್ಲಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿರುವುದು ಮುದ್ದಹನುಮೇಗೌಡ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತಿಗೆ ಪುಷ್ಟಿ ಸಿಕ್ಕಿದಂತಾಗಿದೆ.

ಸಂಕ್ರಾಂತಿ ಹಬ್ಬದ ನಂತರ ಎಸ್.ಪಿ.ಮುದ್ದಹನುಮೇಗೌಡ ಅವರು ರಾಜ್ಯದ ಪ್ರಮುಖ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದುಬಂದಿದೆ.

ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಬಿಜೆಪಿಯಲ್ಲಿ ಟಿಕೆಟ್ ಸಿಗುವುದಿಲ್ಲ ಎಂಬುದು ಖಚಿತವಾದ ನಂತರ ಮುದ್ದಹನುಮೇಗೌಡರು ಕಾಂಗ್ರೆಸ್ ಸೇರುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular