ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಹನುಮಂತಪುರದಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಹಾಸ್ಟೆಲ್ ನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಅಂಜನ್ ಕುಮಾರ್ ಎಂದು ಹೇಳಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಧುಗಿರಿ ತಾಲ್ಲೂಕು ಮುದ್ದೇನಹಳ್ಳಿ ಗ್ರಾಮದ ಅಂಜನ್ ಕುಮಾರ್ ದ್ವಿತೀಯ ಬಿ.ಎ. ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಎಂದು ಹೇಳಲಾಗಿದೆ.
ಹಬ್ಬದ ಪ್ರಯುಕ್ತ ಬಹುತೇಕ ವಿದ್ಯಾರ್ಥಿಗಳ ತಮ್ಮ ತಮ್ಮ ಗ್ರಾಮಗಳಿಗೆ ತೆರಳಿದ್ದು, ರೂಮಿನಲ್ಲಿ ಅಂಜನ್ ಕುಮಾರ್ ಒಬ್ಬನೇ ಇದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸ್ಥಳಕ್ಕೆ ಪೊಲೀಸರು ತೆರಳಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.


