Tuesday, January 28, 2025
Google search engine
Homeಮುಖಪುಟಜನರ ಭಾವನೆಗಳೊಂದಿಗೆ ಆಟ ಆಡುವುದು ನಿಲ್ಲಿಸಿ - ಸಚಿವ ಕೆ.ಎನ್.ರಾಜಣ್ಣ

ಜನರ ಭಾವನೆಗಳೊಂದಿಗೆ ಆಟ ಆಡುವುದು ನಿಲ್ಲಿಸಿ – ಸಚಿವ ಕೆ.ಎನ್.ರಾಜಣ್ಣ

ಕಾಂಗ್ರೆಸ್ ಪಕ್ಷ ಯಾವತ್ತು ಜಾತಿ ಜನಸಂಖ್ಯೆ ನೋಡಿ ಅಧಿಕಾರ ನೀಡಿಲ್ಲ. ದೇವರಾಜ ಅರಸು, ಧರ್ಮಸಿಂಗ್, ವೀರಪ್ಪಮೊಯಿಲಿ ಅವರೆಲ್ಲಾ ಯೋಗ್ಯತೆಯಿಂದ ಅಧಿಕಾರ ಪಡೆದವರೇ ಹೊರತು ಜಾತಿಯ ಬಲದಿಂದಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ.

ತುಮಕೂರಿನ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟ-ತುಮಕೂರು ಜಿಲ್ಲೆ ಇವರು ಆಯೋಜಿಸಿದ್ದ ಹಿಂದುಳಿದ ವರ್ಗಗಳ ಒಕ್ಕೂಟದ ದಶಮಾನೋತ್ಸವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್‌ಗೆ ದಲಿತರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಎಲ್ಲರಿಗೂ ರಾಜಕೀಯ ಅಧಿಕಾರವನ್ನು ನೀಡಿದೆ. ಆದರೆ ಬಿಜೆಪಿ, ಜೆಡಿಎಸ್ ಪಕ್ಷದಿಂದ ಇದು ಸಾಧ್ಯವೇ ಎಂದು ಪ್ರಶ್ನಿಸಿದರು.

ದೇವರಾಜ ಅರಸು ಮುಖ್ಯಮಂತ್ರಿಯಾಗುವ ಸಮಯದಲ್ಲಿ ಅವರು ಜನಪ್ರತಿನಿಧಿಯಲ್ಲ. ಅಂದಿನ ಎಐಸಿಸಿ ಕಾರ್ಯಕಾರಿ ಮಂಡಳಿ ಸದಸ್ಯರಾಗಿದ್ದ ಕೊಲ್ಲೂರು ಮಲ್ಲಪ್ಪ ಸಲಹೆಯಂತೆ ಇಂದಿರಾಗಾಂಧಿ, ಅರಸು ಅವರನ್ನು ಮುಖ್ಯಮಂತ್ರಿ ಮಾಡಿದರು. ಆದರೆ ಅವರು ಜಾರಿಗೆ ತಂದ ಭೂ ಸುಧಾರಣಾ ಕಾಯ್ದೆ,ಜೀತ ವಿಮುಕ್ತಿ ಸೇರಿದಂತೆ ಹಲವಾರು ಯೋಜನೆಗಳು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹೆಸರು ತಂದುಕೊಟ್ಟವು ಎಂದರು.

ಸಂಘಟನೆ ಎಂಬುದು ಒಂದು ನಿರಂತರ ಪ್ರಕ್ರಿಯೆ. ಹಾಗಾಗಿ ಎಲ್ಲಾ ಹಿಂದುಳಿದ ವರ್ಗಗಳ ದಾರ್ಶಾನಿಕ ಜಯಂತಿಗಳನ್ನು ಹಿಂದುಳಿದ ವರ್ಗಗಳ ಒಕ್ಕೂಟದಿಂದ ಆಗಸ್ಟ್ 20ರ ದೇವರಾಜು ಅರಸು ಜಯಂತಿಯಂದು ದಾರ್ಶಾನಿಕರ ದಿನವಾಗಿ ಆಚರಿಸುವುದರಿಂದ ಎಲ್ಲಾ ಹಿಂದುಳಿದ ವರ್ಗಗಳನ್ನು ಒಂದು ವೇದಿಕೆಯಲ್ಲಿ ತರಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು.

ನನ್ನದು ಬಡವರ ಜಾತಿ. ನಾನು ಎಲ್ಲಾ ವರ್ಗದ ಬಡವರ ಪ್ರತಿನಿಧಿ. ಇಂದಿಗೂ ಚಿಕ್ಕಪೇಟೆಯಲ್ಲಿ ಒಂದೊತ್ತಿನ ಊಟ ಮಾಡುವ ಬಡ ಬ್ರಾಹ್ಮಣರಿದ್ದಾರೆ. ಚುನಾವಣೆಗೋಸ್ಕರ ರಾಮನ ಜಪ ಮಾಡುತ್ತಿರುವ ಪಕ್ಷದ ಕಣ್ಣಿಗೆ ಇದು ಕಾಣುವುದಿಲ್ಲವೇ ?, ಇಷ್ಟೊಂದು ಅಬ್ಬರದಲ್ಲಿ ನಡೆಯುತ್ತಿರುವ ರಾಮ ಮಂದಿರದ ಬಿಜೆಪಿಯದ್ದೋ, ಇಲ್ಲ ಮೋದಿ ಅವರದ್ದೋ ಎಂಬುದು ಐದಾರು ತಿಂಗಳಲ್ಲಿ ಗೊತ್ತಾಗಲಿದೆ.ಜನರ ಭಾವನೆಗಳೊಂದಿಗೆ ಆಟ ಆಡುವುದನ್ನು ನಿಲ್ಲಿಸಿದಷ್ಟು ಒಳ್ಳೆಯದು ಎಂದು ತಿಳಿಸಿದರು.

ನಾವೆಲ್ಲರೂ ಹಿಂದುಗಳೇ, ಆದರೆ ನಮ್ಮದು ಗಾಂಧಿಯ ಹಿಂದುತ್ವ, ಬಿಜೆಪಿಯವರದ್ದು ಗೋಡ್ಸೆ ಹಿಂದುತ್ವ. ಗೋಡ್ಸೆ ಹಿಂದುತ್ವವದಲ್ಲಿ ಕೊಲೆ, ಸುಲಿಗೆಗಳಿಲ್ಲದೆ ಇನ್ನೇನು ಇರಲು ಸಾಧ್ಯ? ಮರಾಠರ ಹಿಂದು ಪೇಶ್ವೆಗಳು ಕರ್ನಾಟಕದ ಪ್ರಮುಖ ದೇವಾಲಯಗಳ ಮೇಲೆ ದಾಳಿ ನಡೆಸಿದಾಗ, ಅವರನ್ನು ಹಿಮ್ಮೆಟ್ಟಿಸಿದವ ಮೈಸೂರು ಹುಲಿ ಟಿಪ್ಪು ಸುಲ್ತಾನ್, ಆತನನ್ನು ದೇಶದ್ರೋಹಿ ಎನ್ನುತ್ತಾರೆ. ಟಿಪ್ಪು ಸುಲ್ತಾನ್ ಆರಂಭಿಸಿದ ಕನ್ನಂಬಾಡಿ ಕಟ್ಟೆಯನ್ನು ನಾಲ್ವಡಿ ಕೃಷ್ಣರಾಜ ಒಡೆಯರ್ ಪೂರ್ಣಗೊಳಿಸಿದರು. ಟಿಪ್ಪು ಬಳಕೆ ಮಾಡುತ್ತಿದ್ದ ರಾಕೇಟ್ ತಂತ್ರಜ್ಞಾನವನ್ನು ಇಂದು ಇಸ್ರೋಗೆ ಬಳಕೆ ಮಾಡಲಾಗುತ್ತಿದೆ. ಇತಿಹಾಸವನ್ನು ತಿರುಚುವುದರಿಂದ ಕೆಲ ಕಾಲ ಸತ್ಯವನ್ನು ಮರೆ ಮಾಚಬಹುದು ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular