ವಕೀಲರು ಕೇವಲ ನ್ಯಾಯಕ್ಕಾಗಿ ಶ್ರಮಿಸುವುದು ಮಾತ್ರವಲ್ಲದೇ ಇಡೀ ನ್ಯಾಯಾಂಗ ವ್ಯೆವಸ್ಥೆಯನ್ನು ಕಾಪಾಡಿಕೊಳ್ಳಬೇಕಾದದ್ದು ಕೂಡ ವಕೀಲರ ಆದ್ಯ ಕರ್ತವ್ಯವಾಗಬೇಕಿದೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಎಂ.ಜಿ.ಉಮಾ ಹೇಳಿದ್ದಾರೆ.
ರಾಯಚೂರಿನಲ್ಲಿ ನಡೆಯುತ್ತಿರುವ ಅಖಿಲ ಭಾರತ ವಕೀಲರ ಒಕ್ಕೂಟದ ಮಹಿಳಾ ವಕೀಲರ ರಾಜ್ಯ ಸಮಾವೇಶದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು.
ಮಹಿಳಾ ವಕೀಲರು ಸಮಾನವಾಗಿ ಬೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇಡೀ ಸಮಾಜ ಅವರ ಪ್ರಯತ್ನವನ್ನು ಗುರುತಿಸಿ ಅವರನ್ನು ಬೆಳೆಸುವ ಕೆಲಸವನ್ನು ಮಾಡಬೇಕಿದೆ. ಹಾಗೆಯೇ ಮಹಿಳಾ ವಕೀಲರು ಹಲವಾರು ಸಮಸ್ಯೆ ಹಾಗೂ ಸವಾಲುಗಳನ್ನು ಎದರಿಸುತ್ತಿದ್ದು ಅವುಗಳ ಪರಿಹಾರಕ್ಕೆ ಸಮಾವೇಶಗಳ ಮೂಲಕ ಒಂದೆಡೆ ಸೇರಿ ಚರ್ಚೆ ನಡೆಸಬೇಕು ಎಂದು ಸಲಹೆ ನೀಡಿದ್ದಾರೆ.