ಅಯೋಧ್ಯೆಯಲ್ಲಿ ರಾಮಮೂರ್ತಿಗೆ ಪ್ರಾಣಪ್ರತಿಷ್ಠಾಪನೆ ನಡೆಯಲಿದ್ದು ಇದಕ್ಕೆ ಕರ್ನಾಟಕದಲ್ಲಿ ರಜೆ ಘೋಷಣೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನವರಿ 22ರಂದು ಅಯೋಧ್ಯೆಯಲ್ಲಿ ರಾಮ ಮೂರ್ತಿ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅಂದು ಸರ್ಕಾರಿ ರಜೆ ಘೋಷಣೆ ಮಾಡಬೇಕೆಂದು ಬಿಜೆಪಿ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ಒತ್ತಾಯಿಸಿದ್ದವು. ಆದರೆ ರಜೆ ಘೋಷಣೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.
ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಮುಜರಾಯಿ ಇಲಾಖೆಯಡಿ ಬರುವ ದೇವಾಲಯಗಳಲ್ಲಿ ವಿಶೇಷ ಪೂಜೆ ನಡೆಯುತ್ತದೆ. ಆದರೆ ಸರ್ಕಾರಿ ರಜೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.