ದೆಹಲಿಯಲ್ಲಿಂದು ಬಿಜೆಪಿ ಸೇರ್ಪಡೆಯಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಮ್ಮ ಆತ್ಮಸಾಕ್ಷಿಸಯನ್ನು ಮುಟ್ಟಿ ನೋಡಿಕೊಳ್ಳಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಹಿರಿಯ ನಾಯಕರು. ಅವರನ್ನು ಪಕ್ಷದಲ್ಲಿ ಅತ್ಯಂತ ಗೌರವದಿಂದಲೇ ನಡೆಸಿಕೊಂಡಿದ್ದೇವೆ. ಆದರೂ ಪಕ್ಷ ಬಿಟ್ಟಿದ್ದಾರೆ ಎಂದು ತಿಳಿಸಿದರು.
ಕಳೆದ ಎರಡು ಮೂರು ದಿನಗಳ ಹಿಂದೆ ನನ್ನ ಬಳಿ ಬಂದು ಬಿಜೆಪಿ ಮುಖಂಡರು ಪಕ್ಷ ಸೇರುವಂತೆ ಆಹ್ವಾನ ನೀಡುತ್ತಿದ್ದಾರೆ. ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಲ್ಲ ಎಂದು ಹೇಳಿದ್ದರು ಎಂದು ಹೇಳಿದರು.
ನನಗೆ ಕಾಂಗ್ರೆಸ್ ಪಕ್ಷ ಮರು ಜೀವ ನೀಡಿದೆ ಎಂದು ಹೇಳಿದ್ದರು. ಆದರೂ ಬಿಜೆಪಿ ಸೇರಿದ್ದಾರೆ. ಶೆಟ್ಟರ್ ಇದುವರೆಗೂ ನನಗೆ ರಾಜಿನಾಮೆ ಪತ್ರವನ್ನು ಕಳಿಸಿಲ್ಲ. ನೋಡೋಣ, ಮುಂದೆ ಏನು ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ನೋಡಿಕೊಂಡು ಹೇಳಿಕೆ ನೀಡುತ್ತೇವೆ ಎಂದರು.


