ಕಾಂತರಾಜ್ ವರದಿಯನ್ನು ಸ್ವೀಕರಿಸುತ್ತೇನೆ. ವರದಿಯನ್ನು ಕೊಡುವಂತೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ ಅವರಿಗೆ ಹೇಳಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಚಿತ್ರದುರ್ಗದಲ್ಲಿ ಹಿಂದುಳಿದ ವರ್ಗಗಳ ಮಹಾ ಒಕ್ಕೂಟ ಹಮ್ಮಿಕೊಂಡಿದ್ದ ಶೋಷಿತರ ಜಾಗೃತಿಗಾಗಿ ರಾಜ್ಯಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾಂತರಾಜ್ ವರದಿ ಅವೈಜ್ಞಾನಿವಾಗಿದೆ ಎಂದು ಕೆಲವರು ಹೇಳುತ್ತಾರೆ. ಅದರ ಬಗ್ಗೆ ಚರ್ಚೆ ನಡೆಯಬೇಕು. ಈ ಹಿನ್ನೆಲೆಯಲ್ಲಿ ಕಾಂತರಾಜ್ ವರದಿಯನ್ನು ಸರ್ಕಾರ ಸ್ವೀಕಾರ ಮಾಡಲಿದೆ ಎಂದು ಭರವಸೆ ನೀಡಿದರು.
ಸಮಾಜದಲ್ಲಿ ಎಲ್ಲಿಯವರೆಗೆ ಜಾತಿ ವ್ಯವಸ್ಥೆ ಇರುತ್ತದೆಯೋ ಅಲ್ಲಿಯವರಿಗೆ ಮೀಸಲಾತಿ ಇರಬೇಕು ಎಂದರು. ಅಂಬೇಡ್ಕರ್ ಹೇಳಿದಂತೆ ಆರ್ಥಿಕ ಅಸಮಾನತೆ, ರಾಜಕೀಯ ಅಸಮಾನತೆ ಮತ್ತು ರಾಜಕೀಯ ಅಸಮಾನತೆ ಹೋಗಲಾಡಿಸಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.
ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಬೋಸ್ ರಾಜು, ಕೆ.ಎಚ್.ಮುನಿಯಪ್ಪ, ಬೈರತಿ ಸುರೇಶ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ದಿನೇಶ್ ಗುಂಡೂರಾವ್, ಆರ್.ಬಿ.ತಿಮ್ಮಾಪುರ್, ನಾಗೇಂದ್ರ, ಡಿ.ಸುಧಾಕರ್, ಶಿವರಾಜ್ ತಂಗಡಗಿ, ರಹೀಂಖಾನ್, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡ ಮಾವಳ್ಳಿ ಶಂಕರ್, ಮಾಜಿ ಸಚಿವರಾದ ಎಚ್.ಎಂ.ರೇವಣ್ಣ, ಎಚ್.ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ಶಾಸಕರುಗಳಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಅಜಯ್ ಸಿಂಗ್, ನಸೀರ್ ಅಹಮದ್ ಸೇರಿದಂತೆ ಇತರರು ಇದ್ದರು.