Friday, November 22, 2024
Google search engine
Homeಮುಖಪುಟಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ರಾಜ್ಯದ ಹಲವು ಕಡೆ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಅಕ್ರಮ ಆಸ್ತಿ ಹೊಂದಿದ ಆರೋಪದ ಮೇರೆಗೆ ಈ ದಾಳಿ ನಡೆದಿದೆ. ತುಮಕೂರು, ಹಾಸನ, ಮೈಸೂರು, ಚಿಕ್ಕಮಗಳೂರು, ಬೆಂಗಳೂರು, ಚಿಕ್ಕಮಗಳೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳ ಮೇಲೆ ಬೆಳ್ಳಂಬೆಳಿಗ್ಗೆಯೇ ದಾಳಿ ನಡೆಸಲಾಗಿದೆ.

ಹಾಸನ ಜಿಲ್ಲೆಯ ಆಹಾರ ನಿರೀಕ್ಷಕ ಜಗನ್ನಾಥ್ ಅವರ ನಿವಾಸ, ಅವರ ಸಹೋದರ, ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಮತ್ತು ಕಚೇರಿ, ಮೈಸೂರಿನ ಮೂಡಾ ಇಂಜಿನಿಯರ್ ಯಜ್ಞೇಂದ್ರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಪರಿಶೀಲನೆ ನಡೆಯುತ್ತಿದೆ.

ಮಂಡ್ಯದಲ್ಲಿ ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಹರ್ಷಾ ಅವರ ನಿವಾಸ, ಚಿಕ್ಕಮಗಳೂರಿನ ತರೀಕೆರೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿ ನೇತ್ರಾವತಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.

ತುಮಕೂರಿನ ಶಿರಾಗೇಟ್ ಬಳಿ ಇರುವ ಕೆಆರ್.ಡಿಎಲ್ ಇಂಜಿನಿಯರ್ ಹನುಮಂತರಾಯಪ್ಪ ಅವರ ಮನೆ ಮೇಲೆ ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular