Monday, September 16, 2024
Google search engine
Homeಜಿಲ್ಲೆತುಮಕೂರು - ಕುಣಿಗಲ್ ನಲ್ಲಿ ದುಷ್ಕರ್ಮಿಗಳಿಂದ ವ್ಯಕ್ತಿಯ ಭೀಕರ ಹತ್ಯೆ

ತುಮಕೂರು – ಕುಣಿಗಲ್ ನಲ್ಲಿ ದುಷ್ಕರ್ಮಿಗಳಿಂದ ವ್ಯಕ್ತಿಯ ಭೀಕರ ಹತ್ಯೆ

ಕೆಲ ದುಷ್ಕರ್ಮಿಗಳು ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಕುಣಿಗಲ್ ತಾಲ್ಲೂಕಿನ ಕುಳ್ಳನಂಜಯ್ಯನಪಾಳ್ಯದ ಮರಿಯಪ್ಪ ಎಂದು ಗುರುತಿಸಲಾಗಿದೆ.

ಕುಣಿಗಲ್ ತಾಲ್ಲೂಕಿನ ಹೇರೂರು ಸಮೀಪ ಇರುವ ಕುಳ್ಳನಂಜಯ್ಯನಪಾಳ್ಯದಲ್ಲಿ ಶುಕ್ರವಾರ ರಾತ್ರಿ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಮರಿಯಪ್ಪ ಅವರನ್ನು ಅಡ್ಡಗಟ್ಟಿ ಮಾರಕಾಸ್ತ್ಗಗಳಿಂದ ಹತ್ಯೆಗೈದು ಪರಾರಿಯಾಗಿದ್ದಾರೆ ಎಂದು ಹೇಳಲಾಗಿದೆ.

ದ್ವಿಚಕ್ರವಾಹನದಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸಿದ ಮರಿಯಪ್ಪ ಅವರನ್ನು ಜಮೀನಿನಲ್ಲಿ ಬಲಗೈಯನ್ನು ಕತ್ತರಿಸಿ ಹಾಕಿದ್ದಾರೆ. ಮರಿಯಪ್ಪನ ತಲೆಯನ್ನು ಜಜ್ಜಿ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆಯಾದ ಮರಿಯಪ್ಪನ ಅಣ್ಣ ಅನುಮಾನಿಸಿದ ಗ್ರಾಮ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮರಿಯಪ್ಪನಿಗೆ ನಾಲ್ಕು ಮಂದಿ ಹೆಣ್ಣು ಮಕ್ಕಳಿದ್ದಾರೆ. ಮರಿಯಪ್ಪ ಅತಿಥಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಡಿವೈಎಸ್.ಪಿ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular