Saturday, October 19, 2024
Google search engine
Homeಜಿಲ್ಲೆಎಚ್ಎಸ್ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ದಿನಾಂಕ ವಿಸ್ತರಿಸಲು ಆಗ್ರಹ

ಎಚ್ಎಸ್ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ ದಿನಾಂಕ ವಿಸ್ತರಿಸಲು ಆಗ್ರಹ

ವಾಹನಗಳಿಗೆ ಎಚ್ಎಸ್ಆರ್.ಪಿ ನಂಬರ್ ಪ್ಲೇಟ್ ಗಳನ್ನು ಅಳವಡಿಸಿಕೊಳ್ಳಲು ದಿನಾಂಕವನ್ನು ವಿಸ್ತರಿಸಬೇಕು. ನಂಬರ್ ಪ್ಲೇಟ್ ಅಳವಡಿಕೆಗೆ ನಿಗದಿಪಡಿಸಿರುವ ಮೊತ್ತವನ್ನು ಕಡಿಮೆಗೊಳಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ಹಾಲಪ್ಪ ಸಾರಿಗೆ ಸಚಿವರನ್ನು ಒತ್ತಾಯಿಸಿದ್ದಾರೆ.

ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿದ ಮುರಳೀಧರ ಹಾಲಪ್ಪ, ಕೆ.ಎಸ್.ಆರ್.ಟಿ.ಸಿ ಬಸ್‌ಗಳಿಗೆ ಟೋಲ್‌ಗಳಲ್ಲಿ ವಿನಾಯಿತಿ ನೀಡಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಸ್ತುತ ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ ಜಿಲ್ಲಾ ಕೇಂದ್ರಗಳಿಗೆ ವಾಹನಗಳನ್ನು ತೆಗೆದುಕೊಂಡು ಹೋಗಬೇಕಾಗಿದೆ. ಇದರಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಕೇವಲ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ತಮ್ಮ ವಾಹನಗಳನ್ನು ಜಿಲ್ಲಾ ಕೇಂದ್ರಗಳಿಗೆ ತೆಗೆದುಕೊಂಡು ಹೋಗುವುದುಕಷ್ಟಕರವಾಗಿದೆ. ಹೀಗಾಗಿ ತಾಲ್ಲೂಕು ಕೇಂದ್ರಗಳಲ್ಲಿಯೂ ನಂಬರ್ ಪ್ಲೇಟ್ ಅಳವಡಿಸಲು ಕ್ರಮ ಕೈಗೊಳ್ಳಬೇಕಾಗಿರುತ್ತದೆ ಎಂದು ಮನವಿ ಮಾಡಿದ್ದಾರೆ.

ಆನ್‌ಲೈನ್‌ನಲ್ಲಿ ನೊಂದಣಿ ಮಾಡಲು ಸರ್ವರ್ ಸಮಸ್ಯೆ ಇದೆ. ಗ್ರಾಮೀಣ ಭಾಗದ ಜನರಿಗೆ ಮಾಹಿತಿ ಕೊರತೆ ಸೇರಿದಂತೆ ಹಲವಾರು ಸಮಸ್ಯೆಗಳಿವೆ. ಆದ್ದರಿಂದ ನಂಬರ್ ಪ್ಲೇಟ್ ಅಳವಡಿಕೆಗೆ ಸಮಯವಕಾಶ ವಿಸ್ತರಿಸಬೇಕು. ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ಅಳವಡಿಕೆಗೆ ನಿಗದಿಪಡಿಸಿದ ಮೊತ್ತ ದುಬಾರಿಯಾಗಿದೆ. ಇದರಿಂದ ಬಡ ಹಾಗೂ ಗ್ರಾಮೀಣ ಭಾಗದ ಜನರಿಗೆ ತೊಂದರೆ ಆಗುತ್ತಿದ್ದು, ಹೆಚ್.ಎಸ್.ಆರ್.ಪಿ. ನಂಬರ್ ಪ್ಲೇಟ್ ನಿಗದಿಪಡಿಸಿದ ಮೊತ್ತದಲ್ಲಿ ಶೇ.50ರಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುವಂತೆ ಕೋರಿದರು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಜೊತೆಗೆ ಕ.ರಾ.ರ.ಸಾ.ನಿಗಮಗಳಲ್ಲಿ ಪ್ರಯಾಣಿಸುವ ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಬಲಿಷ್ಠಗೊಳಿಸಲು ಕೆ.ಎಸ್.ಆರ್.ಟಿ.ಸಿ ಬಸ್‌ಗಳಿಗೆ ಎಲ್ಲಾ ಟೋಲ್‌ಗಳಲ್ಲಿ ವಿನಾಯಿತಿ ನೀಡಿದರೆ ಪ್ರಸ್ತುತ ಪ್ರಯಾಣಿಕರಿಂದ ಪಡೆಯುತ್ತಿರುವ ಹಣವನ್ನು ಪಡೆಯುವುದು ತಪ್ಪುವುದು. ಬಸ್ಸಿನ ಪ್ರಯಾಣ ದರ ಮತ್ತಷ್ಟು ಕಡಿಮೆಯಾಗಿ ಜನರಿಗೆ ಅನುಕೂಲವಾಗಲಿದೆ. ಹಾಗಾಗಿ ಟೋಲ್‌ಗಳಲ್ಲಿ ವಿನಾಯಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲು ಮನವಿ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular