Saturday, October 19, 2024
Google search engine
Homeಮುಖಪುಟಕರ್ನಾಟಕದಲ್ಲಿ ನಮ್ಮ ಭಾಷೆಗೆ ಮೊದಲ ಆದ್ಯತೆ - ಡಿಸಿಎಂ ಡಿ.ಕೆ.ಶಿವಕುಮಾರ್

ಕರ್ನಾಟಕದಲ್ಲಿ ನಮ್ಮ ಭಾಷೆಗೆ ಮೊದಲ ಆದ್ಯತೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿಯಲ್ಲಿ ಇರುವ ಮರಾಠಿ ಭಾಷಿಗರು ಕೂಡ ಕರ್ನಾಟಕದವರೇ. ಎಲ್ಲರೂ ಐಕ್ಯತೆಯಿಂದ ಒಟ್ಟಿಗೆ ಹೋಗುವುದು ಮೊದಲ ಕರ್ತವ್ಯವಾಗಬೇಕು. ಕರ್ನಾಟಕದ ಭೂಮಿ, ನಮ್ಮ ಕನ್ನಡ ಭಾಷೆಗೆ ಮೊದಲ ಆದ್ಯತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯಿಸಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹೆಚ್ಚುತ್ತಿದ್ದು, ಕಚೇರಿ ತೆರೆಯಲು ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆಳಗಾವಿಯ ಗ್ರಾಮೀಣ ಭಾಗದ ಜನರಿಗೆ ನಮ್ಮ ಸರ್ಕಾರ ಸಾಕಷ್ಟು ಅನುಕೂಲತೆಗಳನ್ನು ಕಲ್ಪಿಸಿಕೊಟ್ಟಿದೆ. ಅವರು ನಮ್ಮ ನೀರು, ಗಾಳಿ ಕುಡಿಯುತ್ತಿದ್ದಾರೆ. ನಮ್ಮ ಭೂಮಿಯಲ್ಲಿ ವಾಸವಾಗಿದ್ದಾರೆ, ವ್ಯವಸಾಯ ಮಾಡುತ್ತಿದ್ದಾರೆ. ಈ ಬಜೆಟ್ ಅಲ್ಲಿ ಬೆಳಗಾವಿ ಗ್ರಾಮೀಣ ಭಾಗದ ಕೃಷಿ ಭೂಮಿಗಳಿಗೆ ನೀರನ್ನು ಒದಗಿಸಲು ರೂ.900 ಕೋಟಿ ವೆಚ್ಚದಲ್ಲಿ ಯೋಜನೆ ಘೋಷಣೆ ಮಾಡಲಿದ್ದೇವೆ ಎಂದರು.

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಹುತೇಕ ಅಂತಿಮ ಹಂತಕ್ಕೆ ತೆಗೆದುಕೊಂಡು ಹೋಗುತ್ತೇವೆ. ಈ ವಿಚಾರವಾಗಿ ನಾನು ಮತ್ತು ಮುಖ್ಯಮಂತ್ರಿಗಳು ಒಂದು ಸುತ್ತಿನ ಮಾತುಕಥೆ ನಡೆಸಿದ್ದೇವೆ. ಈಗ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳ ಜತೆ ಸಭೆ ಮಾಡುತ್ತೇವೆ, ನಂತರ ಸ್ಕ್ರೀನಿಂಗ್ ಸಮಿತಿ ಸದಸ್ಯರು ಚರ್ಚಿಸಿ ಹೈಕಮಾಂಡಿಗೆ ಪಟ್ಟಿ ಕಳಿಸುತ್ತೇವೆ ಎಂದರು.

ರಾಜ್ಯಸಭೆಗೆ ರಾಜ್ಯದಿಂದ ನಾವು ಹೆಸರುಗಳನ್ನು ಸೂಚಿಸುತ್ತೇವೆ. ನಂತರ ಹೈಕಮಾಂಡ್ ಅಂತಿಮ ತೀರ್ಮಾನ ಮಾಡಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular