Thursday, January 29, 2026
Google search engine
Homeಜಿಲ್ಲೆಲೋಕಸಭಾ ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರಿಗೆ ಮುರುಳೀಧರ ಹಾಲಪ್ಪ ಕರೆ

ಲೋಕಸಭಾ ಚುನಾವಣೆಗೆ ಸಜ್ಜಾಗಲು ಕಾರ್ಯಕರ್ತರಿಗೆ ಮುರುಳೀಧರ ಹಾಲಪ್ಪ ಕರೆ

ಮುಂದಿನ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಾಲಿಗೆ ಅತ್ಯಂತ ಕಠಿಣವಾದ ಪರೀಕ್ಷೆಯಾಗಿದೆ.ಇದನ್ನು ಪಾಸು ಮಾಡಬೇಕೆಂದರೆ ಮುಖಂಡರೊಂದಿಗೆ ಕಾರ್ಯಕರ್ತರು, ಅದರಲ್ಲಿಯೂ ಬೂತ್ ಮಟ್ಟದ ಎಜೆಂಟ್‌ರುಗಳು, ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಬೇಕಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮುರುಳೀಧರ ಹಾಲಪ್ಪ ಹೇಳಿದರು.

ತುಮಕೂರಿನ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬೂತ್ ಮಟ್ಟದ ಎಜೆಂಟರು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಚುನಾವಣಾ ಪೂರ್ವದಲ್ಲಿ ಮತದಾರರನಿಗೆ ನೀಡಿದ್ದ ವಾಗ್ಧಾನವನ್ನು ಈಡೇರಿಸಲು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು, ಸಹಕಾರಿ ಸಚಿವರು ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದಾರೆ. ಅವರ ಕೈ ಬಲಪಡಿಸಿದರೆ ಮಾತ್ರ, ಪಕ್ಷ ಮತ್ತಷ್ಟು ಶಕ್ತಿಯನ್ನು ಪಡೆದುಕೊಂಡು,ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವನ್ನು ಸಮರ್ಥವಾಗಿ ಎದುರಿಸಲು ಸಾಧ್ಯ ಎಂದರು.

ಲೋಕಸಭಾ ಚುನಾವಣೆಯಲ್ಲದೆ, ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗಳಲ್ಲಿಯೂ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು, ಅಧಿಕಾರ ಹಿಡಿಯಬೇಕಿದೆ ಎಂದು ತಿಳಿಸಿದರು.

ವಿಧಾನಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಪಿ.ಆರ್.ರಮೇಶ್ ಮಾತನಾಡಿ, ಬಿ.ಎಲ್.ಎ ಗಳೆಂದರೆ ಮತದಾನದ ದಿನ ಬೂತಗಳಲ್ಲಿ ಪಕ್ಷದ ಪರವಾಗಿ ಕುಳಿತುಕೊಳ್ಳುವ ಎಜೆಂಟರಲ್ಲ. ಅವರು ಮತದಾರರು ಮತ್ತು ಪಕ್ಷದ ನಡುವೆ ಕೊಂಡಿಯಾಗಿ ಕೆಲಸ ಮಾಡುವ ಅತ್ಯಂತ ಜವಾಬ್ದಾರಿಯುತ ಹುದ್ದೆಯಾಗಿದೆ ಎಂದರು.

ಮಾಸ್ ಪಾರ್ಟಿಯಾಗಿರುವ ಕಾಂಗ್ರೆಸ್‌ನ್ನು ಕೇಡರ್ ಬೇಸ್ ಪಾರ್ಟಿಯಾಗಿಸುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಿರಂತರ ಪ್ರಯತ್ನ ನಡೆಸಿದ್ದಾರೆ. ಇದರ ಫಲವಾಗಿ ಎಲ್ಲಾ ಬೂತ ಮಟ್ಟದ ಎಜೆಂಟರನ್ನು ಸಕ್ರಿಯವಾಗಿ ಕಾರ್ಯನಿರ್ವಹಿಸುವಂತೆ ಹುರುದುಂಬಿಸುವುದು. ಅವರ ಮೂಲಕ ಆ ಬೂತ್ ಮಟ್ಟದಲ್ಲಿರುವ ಸಮಸ್ಯೆಯನ್ನು ಅರಿತು, ಪರಿಹಾರ ಒದಗಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡುವ ಬೂತ್ ಮಟ್ಟದ ಎಜೆಂಟರಿಗೆ ಪಕ್ಷದ ಹುದ್ದೆಗಳಲ್ಲದೆ, ಸರಕಾರದ ನೇಮಕಾತಿಗಳಲ್ಲಿ, ಮುಂಬರುವ ಜಿ.ಪಂ, ತಾ.ಪಂ. ಚುನಾವಣೆಗಳಲ್ಲಿ ಸ್ಪರ್ಧಿಸಲೂ ಸಹ ಅವಕಾಶಗಳು ದೊರೆಯಲಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ, ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ನಿಟ್ಟಿನಲ್ಲಿ ಈ ಬೂತ್ ಮಟ್ಟದ ಎಜೆಂಟ್‌ರುಗಳ ಸಭೆಯನ್ನು ಆಯೋಜಿಸಲಾಗಿದೆ. ಇಲ್ಲಿ ಪಕ್ಷದ ಕಾರ್ಯಕರ್ತರ ಕುಂದುಕೊರತೆಯ ಜೊತೆಗೆ, ಆಯಾಯ ಬೂತ್ ಮಟ್ಟದ ಕುಂದುಕೊರತೆಗಳ ನಿವಾರಣೆ ಮತ್ತು ಮತದಾರರ ಪಟ್ಟಿ ಪರೀಕ್ಷಕರಣೆ ವೇಳೆ ಬಿ.ಎಲ್.ಎಗಳು ಯಾವ ರೀತಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಕೆಪಿಸಿಸಿ ಉಪಾಧ್ಯಕ್ಷ ಪಿ.ಆರ್.ರಮೇಶ್, ಕೆಪಿಸಿಸಿ ಸದಸ್ಯ ಮುನೀರ್ ಅಹಮದ್, ಮಾಜಿ ಶಾಸಕರಾದ ಗಂಗಹನುಮಯ್ಯ, ಡಾ.ರಫೀಕ್ ಅಹಮದ್, ಮುಖಂಡರಾದ ಇಕ್ಬಾಲ್ ಅಹಮದ್, ಆತೀಕ್ ಅಹಮದ್, ಷಣ್ಮುಖಪ್ಪ, ನರಸಿಂಹಯ್ಯ, ಬಿ.ಜಿ.ಲಿಂಗರಾಜು, ಹಾಲೆನೂರು ಲೇಪಾಕ್ಷ, ಹೆಬ್ಬೂರು ಶ್ರೀನಿವಾಸ್, ನಾಗಮಣಿ, ಸಂಜೀವಕುಮಾರ್, ರಂಗಸ್ವಾಮಯ್ಯ, ಸುಜಾತ ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular