ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ, ಮಧ್ಯಪ್ರದೇಶ, ತೆಲಂಗಾಣದಿಂದ ಒಟ್ಟು 7 ಮಂದಿ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿದೆ.
ಕರ್ನಾಟಕದ ವಿಧಾನಸಭೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸದಸ್ಯರು 135 ಮಂದಿ ಇದ್ದಾರೆ. ಹೀಗಾಗಿ ಇಲ್ಲಿ ಮೂವರು ಕಾಂಗ್ರೆಸ್ ಅಭ್ಯರ್ಥಿಗಳು ಸುಲಭವಾಗಿ ಆಯ್ಕೆಯಾಗಲಿದ್ದಾರೆ.
ಕರ್ನಾಟಕದಿಂದ ರಾಜ್ಯಸಭೆಗೆ ಕಳುಹಿಸಲು ಅಜಯ್ ಮಾಕನ್, ಡಾ.ಸಯೀದ್ ನಸೀರ್ ಹುಸ್ಸೇನ್, ಜಿ.ಸಿ. ಚಂದ್ರಶೇಖರ್ ಅವರನ್ನು ಕಣಕ್ಕೆ ಇಳಿಸಲಾಗಿದೆ.
ಮಧ್ಯಪ್ರದೇಶದಿಂದ ಅಶೋಕ್ ಸಿಂಗ್ ಅವರನ್ನು ಕಣಕ್ಕೆ ಇಳಿಸಿದ್ದರೆ, ತೆಲಂಗಾಣದಿಂದ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದೆ. ರೇಣುಕಾಚೌದರಿ, ಎಂ.ಅನಿಲ್ ಕುಮಾರ್ ಯಾದವ್ ಅವರನ್ನು ಸ್ಪರ್ಧೆಗೆ ಇಳಿಸಲಾಗಿದೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.


