ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಬಜೆಟ್ ಮಂಡಿಸಿದರು. ಬಜೆಟ್ ನ ಗಾತ್ರ 3 ಲಕ್ಷ 71 ಸಾವಿರ 383 ಕೋಟಿಯದ್ದು ಆಗಿದೆ.
ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿ, ಕೃಷಿ ಅಭಿವೃದ್ಧಿ ಪ್ರಾಧಿಕಾರ ರಚನೆ, ನಮ್ಮ ಮಿಲ್ಲೆಟ್ ಎಂಬ ಹೊಸ ಯೋಜನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.
ರಾಮನಗರ ಮತ್ತು ಶಿಡ್ಲಘಟ್ಟದಲ್ಲಿ 250 ಕೋಟಿ ರೂ ವೆಚ್ಚದಲ್ಲಿ ಅತ್ಯಾಧುನಿಕ ರೇಷ್ಮೆ ಮಾರುಕಟ್ಟೆ ನಿರ್ಮಾಣದ 2ನೇ ಹಂತದ ಕಾಮಗಾರಿ ಕೈಗೆತ್ತಿಕೊಳ್ಳಲು ಕ್ರಮ ವಹಿಸಲಾಗಿದೆ.
ಕರ್ನಾಟಕ ರೈತ ಸಮೃದ್ಧಿ ಯೋಜನೆಯೊಂದಿಗೆ ಸಂಯೋಜಿಸಿ ಕುರಿ ಸಾಕಾಣಿಕೆ, ಹೈನುಗಾರಿಕೆ, ಹಂದಿ ಮತ್ತು ಕೋಳಿ ಸಾಕಾಣಿಕೆಗೆ ಉತ್ತೇನ ನೀಡಲು ತೀರ್ಮಾನಿಸಲಾಗಿದೆ.
ಮೀನುಗಾರಿಕೆ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಮುಂದಿನ ವರ್ಷಗಳಲ್ಲಿ 3 ಸಾವಿರ ಕೋಟಿ ರೂಗಳಷ್ಟು ಬೃಹತ್ ಗಾತ್ರದ ವಿವಿಧ ಯೋಜನೆಗಳ ಅನುಷ್ಠಾನ ಮಾಡಲು ಬಜೆಟ್ ನಲ್ಲಿ ಪ್ರಕಟಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂಗಳಷ್ಟು ದಾಖಲೆಯ ಬೆಳೆ ಸಾಲ ವಿತರಣೆಗೆ ಗುರಿ ಹೊಂದಲಾಗಿದೆ.
ಕಾವೇರಿ ಕಣಿವೆಯ ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ಅನುಷ್ಠಾನಕ್ಕೆ ಒಂದು ಪ್ರತ್ಯೇಕ ಯೋಜನಾ ವಿಭಾಗವನ್ನು ಹಾಗೂ 2 ಉಪವಿಭಾಗಗಳ ಸ್ಥಾಪನೆ
ಎತ್ತಿನಹೊಳೆ ಸಮಗ್ರ ಕುಡಿಯುರವ ನೀರಿನ ಯೋಜನೆಯಡಿ ದೊಡ್ಡನಗರದ ಬಳಿಯ ವಿತರಣಾ ತೊಟ್ಟಿಯವರೆಗೆ ಪೂರ್ಣ ಪರೀಕ್ಷಾರ್ಥ ಚಾಲನೆ,
ಕೆಆರ್.ಎಸ್ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಯ ಪ್ರವಾಸೋದ್ಯಮ ಆಕರ್ಷಣೆಯ ಕೇಂದ್ರವನ್ನಾಗಿ ಉನ್ನತೀಕರಣ.