ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಗೆ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಫೆಬ್ರವರಿ 18ರಂದು ಬೆಳಗ್ಗೆ 10.30ಕ್ಕೆ ತುಮಕೂರಿನ ಎಂಪ್ರೆಸ್ ಆಡಿಟೋರಿಯಂ ನಲ್ಲಿ ದಸಂಸ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಸಹಕಾರ ಸಚಿವ ಕೆ.ಎನ್.ರಾಜಣ್ಣ ಉದ್ಘಾಟಿಸಲಿದ್ದು, ದಸಂಸ ಜಿಲ್ಲಾ ಸಂಚಾಲಕ ಕುಂದೂರು ತಿಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಪುಸ್ತಕ ಬಿಡುಗಡೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ, ಕೋಟಿಗಾನಹಳ್ಳಿ ರಾಮಯ್ಯ, ಚಿಂತಕ ಕೆ.ದೊರೈರಾಜ್, ಕವಿ ಸುಬ್ಬು ಹೊಲೆಯಾರ್, ಹೋರಾಟಗಾರರಾದ ಬೆಲ್ಲದಮಡುಗು ಕೃಷ್ಣಪ್ಪ, ಗಂಗಾಧರಪ್ಪ, ಗಂಗಮ್ಮ ಎಂ.ಎಸ್.ಕೆಂಪಯ್ಯ, ಗಂಗರಾಜಮ್ಮ ಕೆ.ಬಿ.ಸಿದ್ದಯ್ಯ ಭಾಗಿಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿ ದಲಿತ ಚಳವಳಿಯ ಸವಾಲುಗಳು ಮತ್ತು ಸಾಧ್ಯತೆಗಳು ವಿಷಯ ಕುರಿತು ಸಿ.ಜಿ.ಲಕ್ಷ್ಮೀಪತಿ, ಡಾ.ರವಿಕುಮಾರ್ ನೀಹ, ವಿ.ಎಲ್.ನರಸಿಂಹಮೂರ್ತಿ, ಗುರುಪ್ರಸಾದ್ ಕಂಟಲಗೆರೆ ಮಾತನಾಡಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ,ಗಂಗಾಧರ್, ನರಸೀಯಪ್ಪ, ಎನ್.ಜಿ.ರಾಮಚಂದ್ರ, ಸಿಂಗದಹಳ್ಳಿ ರಾಜ್ ಕುಮಾರ್, ಸೇರಿದಂತೆ ಹಲವರನ್ನು ಸನ್ಮಾನಿಸಲಿದ್ದಾರೆ