Saturday, October 19, 2024
Google search engine
Homeಮುಖಪುಟಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ನಿರ್ಧಾರ

ಹಾಸನ, ಮಂಡ್ಯ, ಕೋಲಾರ ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ನಿರ್ಧಾರ

ಕರ್ನಾಟಕ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿಂದು ಭೇಟಿ ಮಾಡಿ ಸೀಟು ಹಂಚಿಕೆ ಕುರಿತು ಚರ್ಚೆ ನಡೆಸಿದ್ದಾರೆ.

ಬಿಜೆಪಿ ಮತ್ತು ಜೆಡಿಎಸ್ ಲೋಕಸಭಾ ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಇದರ ಭಾಗವಾಗಿ ಅಮಿತ್ ಶಾ ಅವರನ್ನು ಭೇಟಿಯಾಗಿರುವ ಎಚ್.ಡಿ.ಕುಮಾರಸ್ವಾಮಿ ಸುಮಾರು 20 ನಿಮಿಷಗಳ ಕಾಲ ಶಾ ಅವರೊಂದಿಗೆ ಚರ್ಚೆ ನಡೆಸಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಚರ್ಚೆಯ ಸಂದರ್ಭದಲ್ಲಿ ಹಾಸನ, ಮಂಢ್ಯ ಮತ್ತು ಕೋಲಾರ ಲೋಕಷಭಾ ಕ್ಷೇತ್ರಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಡಲು ಅಮಿತ್ ಶಾ ಒಪ್ಪಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಜೆಡಿಎಸ್ ಮುಖಂಡರು ರಾಜ್ಯದಲ್ಲಿ ಐದು ಕ್ಷೇತ್ರಗಳನ್ನು ಬಿಟ್ಟುಕೊಡಬೇಕೆಂದು ಕೇಳಿದ್ದು, ಬೆಂಗಳೂರು ಗ್ರಾಮಾಂತರ, ತುಮಕೂರು ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಸಂಬಂಧ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular