ಸುರಪುರದ ಶಾಸಕ ರಾಜಾ ವೆಂಕಟಪ್ಪ ನಾಯಕ ಇಂದು ನಿಧನರಾಗಿದ್ದಾರೆ. ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ ಎಂದು ಅವರು ಹೇಳಿದ್ದಾರೆ.
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ತಿಳಿಸಿದ್ದಾರೆ.
ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.