Friday, November 22, 2024
Google search engine
Homeಮುಖಪುಟಇರುವ ಉದ್ಯೋಗಗಳನ್ನು ಕಸಿದುಕೊಂಡ ಪ್ರಧಾನಿ ಮೋದಿ - ಸಿಎಂ ಸಿದ್ದರಾಮಯ್ಯ ಆರೋಪ

ಇರುವ ಉದ್ಯೋಗಗಳನ್ನು ಕಸಿದುಕೊಂಡ ಪ್ರಧಾನಿ ಮೋದಿ – ಸಿಎಂ ಸಿದ್ದರಾಮಯ್ಯ ಆರೋಪ

ನಿರುದ್ಯೋಗಿ ಯುವಕರಿಗೆ ‘ಯುವ ನಿಧಿ’ ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ‘ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇನೆ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು ಎಂದು ತಿಳಿಸಿದರು.

ಕಳೆದ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಯದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40% ಗೆ ಏರಿಕೆಯಾಗಿದೆ ಎಂದು ಹೇಳಿದರು.

ನಾವು ಯುವ ನಿಧಿಯನ್ನೂ ಕೊಡುತ್ತೇವೆ, ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ವಿದ್ಯಾರ್ಥಿ ಮತ್ತು ಯುವಜನರಿಗೆ ಮೇಲಿರುವ ನಮ್ಮ ಸರ್ಕಾರದ ಅಭಯ ಎಂದರು.

ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ಉದ್ಯಮಿಗಳು, 80 ಸಾವಿರಕ್ಕೂ ಅಧಿಕ ಉದ್ಯೋಗಾಕಾಂಕ್ಷಿ ಯುವ ಜನರು ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular